ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಸೇರಿದಂತೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಇದು ಜಾರಿಯಾಗಲು ಇಷ್ಟವಿಲ್ಲ. ಎಲ್ಲ ಅವಕಾಶವಿದ್ದರೂ ಮತ್ತೆ ಆಯೋಗ ರಚಿಸಿ, ಮೂರು ತಿಂಗಳವರೆಗೆ ಕಾಯಲು ನಿರ್ಧರಿಸಲಾಗಿದೆ. ಇನ್ನು ಜನಗಣತಿ ಆರಂಭವಾದರೆ ಆಗ ಮತ್ತೊಂದು ಸಬೂಬು ಹೇಳಬಹುದು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ವಕ್ಫ್ ಬೋರ್ಡ್ ರೈತರ ಜಮೀನುಗಳನ್ನು ಕಬಳಿಸುತ್ತಿದೆ. ಇದು ಭಾರತಕ್ಕೆ ಸೇರಿದ ಆಸ್ತಿ. ಕಂಡ ಜಮೀನುಗಳೆಲ್ಲ ತಮ್ಮದೇ ಎಂದು ಇವರು ಹೇಳುತ್ತಿದ್ದಾರೆ. ಕೆಲವು ಮತಾಂಧ ಅಧಿಕಾರಿಗಳು ಖಬರ್ಸ್ತಾನ, ವಕ್ಫ್ ಬೋರ್ಡ್ ಆಸ್ತಿ ಎಂದು ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ರೈತರ ಅನ್ನ ಕೀಳುವ ಕೆಲಸ ಮಾಡುತ್ತಿದ್ದಾರೆ ಎಂದರು.
ವಕ್ಫ್ ಆಸ್ತಿಗಳನ್ನು ದೊಡ್ಡ ದೊಡ್ಡ ನಾಯಕರು ನುಂಗಿದ್ದಾರೆ. ಈ ಕುರಿತ ವರದಿಯನ್ನು ಹಿಂದೆ ವಿಧಾನಪರಿಷತ್ನಲ್ಲಿ ಮಂಡಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಈಗ ಆ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಿ ಎಂದರು.
ರಾಜ್ಯ ಸರ್ಕಾರಕ್ಕೆ ಹಣವಿಲ್ಲದೆ ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ ನೀಡಿದೆ. ಆದರೆ ಜಯನಗರ ಶಾಸಕರಿಗೆ ಆ ಅನುದಾನ ಕೂಡ ನೀಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ರಾಮಲಿಂಗಾರೆಡ್ಡಿ ಅವರ ಕ್ಷೇತ್ರಕ್ಕೆ 80 ಕೋಟಿ ರೂ. ನೀಡಲಾಗಿತ್ತು. ಜಯನಗರದ ಜನರು ಕೂಡ ತೆರಿಗೆ ಕಟ್ಟಿದ್ದಾರೆ. ಈ ದ್ವೇಷ ರಾಜಕಾರಣದ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.




