ಮೈಸೂರು: ರಾಜ್ಯದ ಗ್ಯಾರಂಟಿ ಯೋಜನೆಗೆಗಳಿಗೆ ದುಡ್ಡಿಲ್ಲ ಎಂದು ನಾವು ಬಿಜೆಪಿ ಬಳಿ ಸಾಲ ಕೇಳಿಲ್ಲ. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ. ಆದರೆ ಮಣ್ಣಿನ ಮಕ್ಕಳು ಎನಿಸಿಕೊಂಡವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಪಿಎಲ್ ಕಾರ್ಡು ರದ್ದತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವ ಕೇಂದ್ರ ಸಚಿವರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಹೇಗೆ ಸಹಿಸಿಕೊಂಡು ಇದ್ದಾರೆ ಎಂದು ಪ್ರಶ್ನಿಸಿದರು.
ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ಇದು ಮಣ್ಣಿನ ಮಕ್ಕಳು ಎಂದೆನಿಸಿಕೊಂಡವರಿಗೆ ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದರು.
ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ. ಇದನ್ನು ಸರಿಪಡಿಸಿ ಎಂದು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರೆ ಅವರು ಸಾಧ್ಯವಿಲ್ಲ ಎನ್ನುತ್ತಾರೆ. ಇದು ಕರ್ನಾಟಕದ ಬಗ್ಗೆ ಅವರ ಧೋರಣೆಯಾಗಿದೆ ಎಂದರು.
ರೈತರಿಗೆ ಶೇ 4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ. 10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅವರಿಗೆ ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಈ ಅನ್ಯಾಯ ಸರಿಪಡಿಸಲಿ ಎಂದು ಸವಾಲೆಸೆದರು.
ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.




