ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಬಡವರು ಆರ್ಥಿಕವಾಗಿ ಸಬಲರಾಗಿದ್ದಾರೆ. ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಪ್ರಶ್ನಿಸಿದರು.
ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನು ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದೆ ಎಂದರು.
ನಿನ್ನೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದರು.




