ಬೆಂಗಳೂರು: ರಾಜ್ಯದಾದ್ಯಂತ ಭಾರಿ ಮಳೆ ಆಗುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಭಾರಿ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೂಡಾ ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ತಾಕೀತು ಮಾಡಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು ಇದೇ 30 ಮತ್ತು 31ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ ಮತ್ತು ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದೆ. ಇಲ್ಲೀಗ ಮುಂಜಾಗ್ರತೆಯಾಗಿ 2,296 ಕಾಳಜಿ ಮತ್ತು ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ. ಇದೇ 26 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ 99 ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ 97,351.95 ಲಕ್ಷ ಅನುದಾನವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




