ಬೆಂಗಳೂರು: ತಮ್ಮನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿರುವ ಸಿಐಡಿ ವಿಚಾರಣೆಗೆ ಬರುವಂತೆ ನೋಟೀಸ್ ನೀಡಿದೆ ಎಂದು ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸ್ವರೂಪದ ತನಿಖೆ ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ. ತಾವು ಇಂತಹದೇ ತನಿಖೆ ಬೇಕು ಎಂದು ಹೇಳುವುದಿಲ್ಲ. ಈಗ ವಿಚಾರಣೆಗೆ ಕರೆದಿದ್ದಾರೆ. ಅವರಿಗೆ ಎಲ್ಲ ಮಾಹಿತಿ ನೀಡುತ್ತೇನೆ ಎಂದರು.
ಇದನ್ನು ಯಾರು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ತನಿಖೆ ನಂತರ ಈ ಬಗ್ಗೆ ಸ್ಪಷ್ಟವಾಗಿ ತಿಳಿಯಲಿದೆ. ಇಂಥ ಪ್ರಯತ್ನವನ್ನು ನಮ್ನ ಪಕ್ಷ, ಅಥವಾ ಬೇರೆ ಪಕ್ಷದವರೂ ಮಾಡಿರಬಹುದು. ಬೆಂಗಳೂರು, ಮುಂಬೈನವರೂ ಇರಬಹುದು. ರಾಜಕೀಯೇತರ ವ್ಯಕ್ತಿಗಳು ಮಾಡಿರಬಹುದು. ಯಾರೇ ಮಾಡಿದರೂ ಇದು ಖಂಡನಾರ್ಹ. ಕಾನೂನು ಬಾಹಿರ ಕ್ರಮಕ್ಕೆ ಕುಮ್ಮಕ್ಕು ನೀಡಿದವರಿಗೆ, ಪ್ರಯತ್ನಿಸಿದವರಿಗೆ ದೇವರು ಒಳ್ಳೆಯದು ಮಾಡಲ್ಲ. ಅಂತವರು ಸಾರ್ವಜನಿಕ ಜೀವನದಲ್ಲಿ ಇರಬಾರದು ಎಂದರು.




