ದೆಹಲಿ \ ಬೆಂಗಳೂರು: ಹೈಕಮಾಂಡ್ ಕರೆಯ ಮೇರೆಗೆ ದೆಹಲಿಗೆ ಬಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮಾತುಕತೆಯ ವೇಳೆ ರಾಜ್ಯಪಾಲರು ಕೇಂದ್ರ ಮಂತ್ರಿ ಕುಮಾರಸ್ವಾಮಿ ಮತ್ತು ಕೆಲವು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ತನ್ನ ಒಂದುವರೆ ವರ್ಷ ಆಡಳಿತ ಅವಧಿಯಲ್ಲಿ ಯಾವುದೇ ವಿಷಯದಲ್ಲೂ ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಇಳಿದಿರಲಿಲ್ಲ. ಈಗ ಸಂಘರ್ಷಕ್ಕೆ ಇಳಿಯುವುದು ಅನಿವಾರ್ಯವಾದಂತಾಗಿದೆ ಎಂದು ವಿವರಿಸಿದರು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಜಾರ್ಖಂಡ್ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಎನ್ ಸಿ ಪಿ ನಾಯಕ ಶರದ್ ಪವಾರ್ ಅವರು ತಮ್ಮ ಜೊತೆ ಮಾತನಾಡಿದ್ದು ರಾಜ್ಯಪಾಲರ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡುವಂತೆ ಸಲಹೆ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.
ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ರಾಜ್ಯದ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸಲು ಸಂಚು ರೂಪಿಸಿದೆ ಎಂದು ಈ ಮುಖ್ಯಮಂತ್ರಿಗಳು ತಮಗೆ ತಿಳಿಸಿದ್ದಾರೆ. ಅಲ್ಲದೆ ಇದರ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟದ ಅಗತ್ಯವಿದೆ ಎಂದು ಹೇಳಿದ್ದು, ತಾವು ಈ ವಿಷಯವನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ ಎಂದು ತಿಳಿಸಿರುವುದಾಗಿ ಸಭೆಗೆ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ಸಿನ ಎಲ್ಲ ಶಾಸಕರು ಮತ್ತು ಮಂತ್ರಿಗಳು ತಮಗೆ ಬೆಂಬಲವಾಗಿ ನಿಂತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ರಾಜಭವನವನ್ನು ಬಳಸಿಕೊಂಡು ಮಾಡುತ್ತಿರುವ ಪಿತೂರಿಯ ವಿರುದ್ಧ ದೆಹಲಿಯ ರಾಷ್ಟ್ರಪತಿ ಭವನದ ಮುಂದೆ ಪ್ರತಿಭಟನೆ ಮಾಡಬೇಕು ಎಂದು ಶಾಸಕರು ಸಲಹೆ ಮಾಡಿದ್ದಾರೆ. ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಒಗ್ಗಟ್ಟಿನಿಂದ ಈ ಬಗ್ಗೆ ಮನವಿ ಮಾಡಿದ್ದು ಹೈಕಮಾಂಡ್ ಈ ಬಗ್ಗೆ ನಮಗೆ ಮಾರ್ಗದರ್ಶನ ಮಾಡಬೇಕು ಎಂದು ಕೋರಿದರು ಎಂದು ತಿಳಿದುಬಂದಿದೆ.




