ಸುವರ್ಣ ಮಹೋತ್ಸವ ಕಾರ್ಯಕ್ರಮ

5 months ago

ನವೆಂಬರ್ 5 ರಂದು ಹೈಸ್ಕೂಲ್ ಮೈದಾನದಲ್ಲಿ ಆಯೋಜನೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಡೆಯಲಿದೆ ಉತ್ಸವ

ದಾವಣಗೆರೆ: ಜಿಲ್ಲಾಡಳಿತ ದಾವಣಗೆರೆ, ಹಾವೇರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನವಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸಮರ್ಪಣೆ, ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಉದ್ಘಾಟಿಸುವರು. ದಕ್ಷಿಣ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಾಗಿರುವರು.

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಜವಳಿ, ಕಬ್ಬು ಅಭಿವೃದ್ದಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಉಪಸಭಾಧ್ಯಕ್ಷ ಹಾಗೂ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ.ನೀ.ಶಿವಣ್ಣನವರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷ ಸೈಯದ್ ಅಜೀಮ್ಪೀಿಠ ಎಸ್.ಖಾದ್ರಿ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಪಾಟೀಲ್ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಪ್ರೊ.ಎಸ್.ವಿ ಸಂಕನೂರ, ಚಿದಾನಂದ ಎಂ.ಗೌಡ, ಪ್ರದೀಪ ಎಸ್ ಶೆಟ್ಟರ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಶ್ರೀನಿವಾಸ ವಿ ಮಾನೆ, ಯು.ಬಿ ಬಣಕಾರ, ಪ್ರಕಾಶ.ಕೆ ಕೋಳಿವಾಡ, ಯಾಸೀರ ಅಹ್ಮದ್ಖಾದನ್ ಪಠಾಣ,  ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ್, ಬಯಲು ಸೀಮೆ ಪ್ರದೇಶಭಿವೃದ್ದಿ ಮಂಡಳಿಯ ಅಧ್ಯಕ್ಷ ಹೆಚ್.ಬಿ ಮಂಜಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಹೆಚ್ ಮರಿಯೋಜಿರಾವ್, ಗಡಿ ಪ್ರದೇಶಗಳ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಾಮನೂರು ಟಿ.ಬಸವರಾಜ, ಹಾವೇರಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ.ಎಂ.ಹಿರೇಮಠ, ಉಪಸ್ಥಿತರಿರುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Leave a Reply