ವಸತಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಗೆ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಗುರಿ ನಿಗದಿಪಡಿಸಲಾಗಿದೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಸಮುದಾಯದ ಅರ್ಹ ಅಲೆಮಾರಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಹೊಸದುರ್ಗದ “ಸಹಾಯಕರ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ” ಕಚೇರಿಯಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ, ಜೂನ್ 30 ರ ಒಳಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08199-230050 ಸಂಪರ್ಕಿಸಬಹುದು.




