ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಸ್ಕಾಚ್ ವಿಸ್ಕಿ ಸೇರಿದಂತೆ ಎಲ್ಲ ಪ್ರೀಮಿಯಂ ಮದ್ಯ ಮಾರಾಟ ದರವನ್ನು ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಾಜ್ಯಾದ್ಯಂತ ನೂತನ ದರಗಳು ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುತ್ತಿದ್ದು, ಎಲ್ಲಾ ಪ್ರೀಮಿಯಂ ಮದ್ಯದ ದರ ಶೇ 15ರಿಂದ ಶೇ 20ರಷ್ಟು ದರ ಇಳಿಕೆ ಆಗಲಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕಕ್ಕೆ ಹೋಲಿಸಿದರೆ ನೆರೆಯ ರಾಜ್ಯಗಳಲ್ಲಿ ಪ್ರೀಮಿಯಂ ಮದ್ಯ ಮಾರಾಟದರ ಕಡಿಮೆ ಇದೆ. ಇದರಿಂದ ಗಡಿ ಪ್ರದೇಶದ ರಾಜ್ಯದ ಅಂಗಡಿಗಳಲ್ಲಿ ಮಧ್ಯ ಮಾರಾಟವಾಗುತ್ತಿಲ್ಲ. ಅಲ್ಲದೆ ಭಾರಿ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಕೂಡ ನಡೆಯುತ್ತಿದೆ ಎಂಬ ವರದಿಗಳಿವೆ.
ಈ ಹಿನ್ನೆಲೆಯಲ್ಲಿ ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು 2024-25ರ ಬಜೆಟ್ನಲ್ಲಿ ಘೋಷಿಸಿದ್ದರು. ಅದರಂತೆ ದುಬಾರಿ ಬೆಲೆಯ ಮದ್ಯ ಮಾರಾಟ ದರ ಇಳಿಕೆ ಮಾಡಿ ಜೂನ್ನಲ್ಲೇ ಕರಡು ಅಧಿಸೂಚನೆ ಹೊರಡಿಸಿದ್ದ ಅಬಕಾರಿ ಇಲಾಖೆ, ಜುಲೈ 1ರಿಂದ ದರ ಇಳಿಕೆಗೆ ಮುಂದಾಗಿತ್ತು. ಆದರೆ ಆಗ ಗ್ಯಾರಂಟಿ ಯೋಜನೆ ಸೇರಿದಂತೆ ಕಾರಣಗಳಿಂದ ಸಂಪನ್ಮೂಲ ಕೊರತೆ ಎದುರಿಸುತ್ತಿದ್ದ ಆರ್ಥಿಕ ಇಲಾಖೆ ಸೂಚನೆಯಂತೆ ದರ ಪರಿಷ್ಕರಣೆ ತಡೆ ಹಿಡಿಯಲಾಗಿತ್ತು.
ಇದೀಗ ಬದಲಾದ ಲೆಕ್ಕಾಚಾರದಂತೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿರುವ ಅಬಕಾರಿ ಇಲಾಖೆ, ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಪರಿಷ್ಕರಿಸಿ ಆಗಸ್ಟ್ 23ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಪರಿಷ್ಕೃತ ದರಗಳು ರಾಜ್ಯದಾದ್ಯಂತ ಜಾರಿಗೆ ಬಂದಿವೆ.




