ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಏಳನೇ ವೇತನ ಆಯೋಗ ರಚನೆ

3 years ago

ದಾವಣಗೆರೆ / ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ‌ ಕೊನೆಗೂ ಸಿಹಿ ಸುದ್ದಿ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪ ಇರುವ ಸಂದರ್ಭದಲ್ಲೇ ರಾಜ್ಯ ಸರ್ಕಾರಿ ನೌಕರರ  ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ರಚಿಸಲಾಗಿದೆ.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ಫೋಷಿಸಿದ್ದಾರೆ.

ಐದು ವರ್ಷ ಪೂರ್ಣಕ್ಕೂ ಮೊದಲೇ ಆಯೋಗ: ಐದು ವರ್ಷಗಳಿಗೆ ಒಮ್ಮೆ ವೇತನ ಆಯೋಗ ರಚನೆ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿ 4 ವರ್ಷ 7 ತಿಂಗಳಿಗೆ ರಚನೆ ಮಾಡಲಾಗುತ್ತಿದೆ ಎಂದಿದ್ದಾರೆ. ಈ ನಡುವೆ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿರುವ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ನೌಕರರಿಗೆ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವಾಗಲಿದೆ ಎಂದರು

ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ರಾಜ್ಯ ಎಲ್ಲ ನೌಕರರ ಪರವಾಗಿ ನವೆಂಬರ್10 ರಂದು ರೇಸ್‌ಕೋರ್ಸ್‌ ರಸ್ತೆಯ ಅವರ ನಿವಾಸದಲ್ಲಿ ಸನ್ಮಾನಿಸಲಾಗುವುದು ಎಂದು ಷಡಾಕ್ಷರಿ ಅವರು ಮಾಹಿತಿ ನೀಡಿದರು.

Leave a Reply