ಶಿವಮೊಗ್ಗ: ಕುಂಸಿ-ಅರಸಾಳು ಸುತ್ತಮುತ್ತಲಿನ ಊರುಗಳವರು ಇನ್ನು ಮುಂದೆ ರೈಲಿಗಾಗಿ ಆನಂದಪುರಕ್ಕೊ ಸಾಗರಕ್ಕೊ ಶಿವಮೊಗ್ಗಕ್ಕೊ ಹೋಗಬೇಕಿಲ್ಲ. ನಾಳೆಯಿಂದ, ಅಂದರೆ 24 ಆಗಸ್ಟ್ 2023 ರಿಂದ ದಿನಾ ನಾಲ್ಕು ಮುಖ್ಯ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ ಎಂದು ಶಿವಮೊಗ್ಗ ಸಂಸದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ವೇಳಾಪಟ್ಟಿ
ಸಂಜೆಯ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲು ಅರಸಾಳು ನಿಲ್ದಾಣದಲ್ಲಿ ಸಂಜೆ 04.03ಕ್ಕೆ ಮತ್ತು ಕುಂಸಿ ನಿಲ್ದಾಣದಲ್ಲಿ ಸಂಜೆ 04.21ಕ್ಕೆ.
ಬೆಳಗಿನ ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಕುಂಸಿ ನಿಲ್ದಾಣದಲ್ಲಿ ಬೆಳಿಗ್ಗೆ 11.31ಕ್ಕೆ ಮತ್ತು ಅರಸಾಳು ರೈಲು ನಿಲ್ದಾಣದಲ್ಲಿ 11.48ಕ್ಕೆ.
ರಾತ್ರಿಯ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲು ಅರಸಾಳು ರೈಲು ನಿಲ್ದಾಣದಲ್ಲಿ ರಾತ್ರಿ 10.05 ಕ್ಕೆ.
ಮುಂಜಾನೆಯ ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಅರಸಾಳು ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 5.45 ಕ್ಕೆ.
ಇದು ಸದ್ಯದ ಮಾಹಿತಿ. ಪರಿಪೂರ್ಣ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆಯು ಸದ್ಯದಲ್ಲಿಯೇ ಬಿಡುಗಡೆ ಮಾಡಲಿದೆ.ಈ ನಿಲುಗಡೆಗಳಿಗಾಗಿ ಕಳೆದ ಮೇ ತಿಂಗಳಿನಲ್ಲಿ ಮನವಿ ಕೊಡಲಾಗಿತ್ತು. ಅದನ್ನು ತ್ವರಿತವಾಗಿ ಈಡೇರಿಸಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಬೋರ್ಡ್, ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್, ರೈಲ್ವೆ ಮೈಸೂರು ಡಿವಿಜನಲ್ ಮ್ಯಾನೇಜರ್ ಶಿಲ್ಪಿ ಅಗರವಾಲ್ ಅವರಿಗೆ ಶಿವಮೊಗ್ಗ ಕ್ಷೇತ್ರದ ಪರವಾಗಿ ಅನಂತಾನಂತ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಭಾರತದಲ್ಲಿ ಒಂದು ರೈಲ್ವೆ ಸಂಪರ್ಕ ಕ್ರಾಂತಿಯನ್ನೇ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಕೃತಜ್ಞತೆಗಳು. ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ಈ ನಿಲುಗಡೆಯ ಕೊಡುಗೆಯನ್ನು ಪ್ರಯಾಣಿಕರು ಸಮರ್ಥವಾಗಿ ಬಳಕೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಈ ನಿಲುಗಡೆಯನ್ನು ಮುಂದುವರೆಸುವ ಸಾಧ್ಯತೆಗಳಿರುವುದರಿಂದ, ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕೆನ್ನುವುದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.



