ಬೆಂಗಳೂರು: ಅಧಿಕಾರ ಹಸ್ತಾಂತರ ಚರ್ಚೆ ನಡೆದಿರುವಾಗ ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸುತ್ತೇನೆ ಎಂದಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತಿರುವುದಾಗಿ ತಿಳಿಸಿದರು.
ತಾವು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಎಲ್ಲ 140 ಮಂದಿ ಕಾಂಗ್ರೆಸ್ ಶಾಸಕರಿಗೂ ನಾಯಕನಾಗಿದ್ದೇನೆ. ನನಗೆ ಯಾವುದೇ ಬಣ ಇಲ್ಲ. ಈ ಬಣ ರಾಜಕಾರಣದಲ್ಲಿ ನನಗೆ ನಂಬಿಕೆ ಇಲ್ಲ. ಎಲ್ಲಾ 140 ಶಾಸಕರು ನನ್ನ ಬಣದಲ್ಲಿಯೇ ಇದ್ದಾರೆ ಎಂದರು.
ಸಿಎಂ ಹೈಕಮಾಂಡ್ ಹೇಳಿದಂತೆ ಕೇಳುತ್ತಾರೆ. ಹೈಕಮಾಂಡ್ ಹೇಳಿದರೆ ಮಂತ್ರಿಮಂಡಲ ಪುನಾರಚನೆ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಮೇಲೆ ಕಣ್ಣು ಇಟ್ಟಿರುವ ಅನೇಕ ಮಂದಿ ಶಾಸಕರು ತಮ್ಮನ್ನು ಭೇಟಿ ಮಾಡಿ ಅವರ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಗುಂಪು ರಾಜಕಾರಣ ಅಥವಾ ಬಣ ರಾಜಕಾರಣ ಎಂದು ಹೇಳುವುದು ತಪ್ಪು ಎಂದರು.
ಕೆಲವು ಶಾಸಕರು ಕೂಡ ಇದೇ ಕಾರಣಕ್ಕೆ ದೆಹಲಿಗೆ ಹೋಗಿರಬಹುದು. ಹೈಕಮಾಂಡ್ ನ ನಾಯಕರನ್ನು ಭೇಟಿ ಮಾಡಿ ತಮಗೆ ಮಂತ್ರಿ ಮಾಡುವಂತೆ ಮನವಿ ಮಾಡುತ್ತಿರಬಹುದು. ಈ ಬಗ್ಗೆ ತಮಗೆ ತಮಗೇನೂ ತಿಳಿದಿಲ್ಲ. ಆದರೆ ಎಂದಿಗೂ ತಾವು ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಿ ತಮ್ಮನ್ನು ಸಿಎಂ ಮಾಡಿ ಎಂದು ಕೇಳುವುದಿಲ್ಲ ಹೈಕಮಾಂಡ್ ಗೆ ಎಲ್ಲವೂ ಗೊತ್ತಿದೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.




