ಕೋಲ್ಕೊತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಬೆಳಿಗ್ಗೆ ಕಾಂಜನಜುಂಗಾ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ 25 ಪ್ರಯಾಣಿಕರು ಗಾಯಗೊಂಡಿದ್ದಾರೆ.
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ಡಾಗೆ ಪ್ರಯಾಣಿಸುತ್ತಿದ್ದಾಗ ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ.
ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಅಪಘಾತದಲ್ಲಿ ಹಳಿತಪ್ಪಿವೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಹಿಂದಿನ ಭಾಗ ಕಾರ್ಗೋ ವ್ಯಾನ್ ಮತ್ತು ಗಾರ್ಡ್‌ನ ಕೋಚ್ ಮತ್ತು ಪ್ರಯಾಣಿಕರ ವಿಭಾಗಗಳನ್ನು ಒಳಗೊಂಡಿರುವುದು ಅಪಘಾತದಲ್ಲಿ ಸೀಮಿತ ಸಾವುನೋವುಗಳನ್ನು ಉಂಟುಮಾಡಿದೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ವೈದ್ಯರು ಮತ್ತು ವಿಪತ್ತು ನಿರ್ವಹಣಾ ದಳಗಳು ಸ್ಥಳಕ್ಕೆ ಧಾವಿಸಿವೆ ಎಂದು ಹೇಳಿದ್ದಾರೆ.
ರೈಲ್ವೇ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಗುವಾಹಟಿಯಲ್ಲಿ 033-23508794 ಮತ್ತು 033-23833326 (ಸೀಲ್ದಾಹ್) ಮತ್ತು 03612731621, 03612731622 ಮತ್ತು 03612731623 ಸಂಖ್ಯೆಗಳು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೈಲು ಅಪಘಾತದಲ್ಲಿ ಜೀವಹಾನಿಯ ಸುದ್ದಿ ತಿಳಿದು ತೀವ್ರವಾದ ದುಃಖವಾಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಯಶಸ್ಸಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ನೀಡಿದ್ದಾರೆ.


