ಬೆಂಗಳೂರು: ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲ ಪ್ರಯತ್ನ ನಡೆಸುತ್ತೇವೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕೃಷ್ಣಾ ನ್ಯಾಯಾಧಿಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ಮಾತಾಡಿದ ಸಿದ್ದರಾಮಯ್ಯ, ನ್ಯಾಯಾಧಿಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧಿಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಹೀಗಾಗಿ ಕೇಂದ್ರದ ಮೇಲೆ ಒತ್ತಡ ಏರಲು ಅನುಸರಿಸಬೇಕಾದ ಕ್ರಮಗಳ ಕುರಿತು ಸರ್ವ ಪಕ್ಷಗಳ ನಾಯಕರ ಜೊತೆ ಚರ್ಚೆ ಮಾಡಲಾಗುವುದು ಎಂದರು.
ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧಿಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧಿಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದರು.
ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ. ಆದರೆ, ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧಿಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧಿಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆ ಎಂದರು.




