ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿರುವ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆಪಾದಿಸಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಣ ಮಾಡುವ ಶಕ್ತಿ ಸರ್ಕಾರಕ್ಕಿದೆ. ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದರು.
ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ವರದಿ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ನಾಲ್ಕು ತಿಂಗಳ ವರದಿ ಇಟ್ಟುಕೊಂಡು ವಿಶ್ಲೇಷಣೆ ಮಾಡಲಾಗದು. ಒಂದೊಂದು ಘಟನೆಗೂ ಪ್ರತ್ಯೇಕ ಕಾರಣಗಳು ಇರುತ್ತವೆ ಎಂದರು.
ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ಜನರಿಗೆ ಗೊತ್ತಾಗುತ್ತದೆ ಎಂದರು.




