ಬೆಂಗಳೂರು: ಭಾರಿ ಮಳೆಯಿಂದ ರಾಜ್ಯದ ಬೆಳಗಾವಿ, ಬಾಗಲಕೋಟೆ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ಈ ಪ್ರದೇಶಗಳ ಬಗ್ಗೆ ವ್ಯಾಪಕ ನಿಗಾ ವಹಿಸಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿದ್ದು, ಪರಿಹಾರ ಕಾರ್ಯದ ಉಸ್ತುವಾರಿಯಲ್ಲಿ ತೊಡಗಿದ್ದಾರೆ ಎಂದರು.
ಕಂದಾಯ ಸಚಿವ ಕೃಷ್ಣಭೈರೇಗೌಡ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಅಗತ್ಯ ಪರಿಹಾರಗಳನ್ನು ಕೊಡಿಸುತ್ತಿದ್ದಾರೆ. ವಿಪಕ್ಷಗಳವರು ತಡವಾಗಿ ಎಚ್ಚೆತ್ತುಕೊಂಡು ಬಾಧಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.
ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾದ ಜನರ ನೆರವಿಗೆ ಧಾವಿಸುವ ಬದಲಿಗೆ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕೆ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ ಅವರು, ಈ ಪಾದಯಾತ್ರೆಗೆ ನಾವು ಯಾವುದೇ ರೀತಿಯ ಅಡ್ಡಿ ಮಾಡುವುದಿಲ್ಲ. ಜನರೇ ಅವರಿಗೆ ಉತ್ತರ ಕೊಡುತ್ತಾರೆ ಎಂದರು.




