ಬೆಳಗಾವಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಎರಡು ಮಹಾನಗರ ಪಾಲಿಕೆಗಳಾಗಿ ವಿಭಜಿಸಲಾಗಿದೆ. ಈ ಸಂಬಂಧ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿ ಏಳು ತಿಂಗಳ ಕಳೆದಿದ್ದರೂ ಅದಕ್ಕೆ ಅವರು ಅನುಮೋದನೆ ನೀಡಿಲ್ಲ ಎಂದು ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಬೇಸರ ವ್ಯಕ್ತಪಡಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ಸಿನ ಪ್ರಸಾದ್ ಅಬ್ಬಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಆಡಳಿತಾತ್ಮಕ ದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿ ಅಂಕಿತ ಹಾಕಬೇಕಿತ್ತು ಆದರೆ ಇಲ್ಲಿಯವರೆಗೆ ಅವರು ಅನುಮೋದನೆ ನೀಡಿಲ್ಲ ಎಂದರು.
ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಎರಡು ಬಾರಿ ಪತ್ರ ಕೂಡ ಬರೆಯಲಾಗಿದೆ ಆದರೂ ಕೂಡ ಅವರು ಅನುಮೋದನೆ ನೀಡಿಲ್ಲ ಎಂದರು.
ರಾಜ್ಯ ಸರ್ಕಾರದ ಈ ನಿರ್ಧಾರದಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಆಡಳಿತಾತ್ಮಕವಾಗಿ ಕೈಗೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಬೇಕು ಈ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ಬಿಜೆಪಿ ನಾಯಕರನ್ನು ಸೇರಿಸಿಕೊಂಡು ನಿಯೋಗದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.ಆಡಳಿತಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಶಾಸಕರೂ ಸಹ ರಾಜ್ಯಪಾಲರ ಮೇಲೆ ಒತ್ತಡ ಹಾಕಿ ಕಡತಕ್ಕೆ ಸಹಿ ಹಾಕಿಸುವಂತೆ ಮನವಿ ಮಾಡಿದರು.




