ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸುವ ಅಧಿಕಾರ ಇಲ್ಲ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ರಾಜ್ಯಪಾಲರಿಗೆ ಅವಕಾಶವಿದೆ. ಆದರೆ ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸುವ ಅಧಿಕಾರ ಇಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಿಎಂ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿರುವ ಮನವಿಯ ಬಗ್ಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ರಾಜ್ಯಪಾಲರು ಸಿಎಂಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಲು ಸಲಹೆ ಮಾಡಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಗೃಹ ಇಲಾಖೆ ಗೆ ವರದಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ 4 ಹಿರಿಯ ವಕೀಲರ ಅಭಿಪ್ರಾಯ ಕೋರಿದ್ದಾರೆ. ರಾಜ್ಯಪಾಲರೊಂದಿಗೆ ಸಮಾಲೋಚನೆ ನಡೆಸಿದ ವಕೀಲರು, ಈ ಕುರಿತು ಇರುವ ಸುಪ್ರೀಂ ಕೋರ್ಟ್ ನ ತೀರ್ಪುಗಳು ಮತ್ತು ವಿವಿಧ ರಾಜ್ಯಗಳಲ್ಲಿನ ನಿರ್ಧಾರಗಳನ್ನು ಅವಲೋಕಸಿ ಪ್ರತ್ಯೇಕ ವರದಿಯೊಂದನ್ನು ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣಗಳು ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ತಜ್ಞರು ವರದಿ ನೀಡಿದ್ದಾರೆ ಎನ್ನಲಾಗಿದೆ.
2004ರಲ್ಲಿ ಮಧ್ಯಪ್ರದೇಶದ ಇಬ್ಬರು ಸಚಿವರ ಮೇಲೆ ಭೂಕಬಳಿಕೆ ಸಂಬಂಧ ದೂರು ದಾಖಲಾಗಿತ್ತು. ಇವರ ವಿರುದ್ಧ ದೂರು ದಾಖಲಿಸದಂತೆ ಸಚಿವ ಸಂಪುಟದಲ್ಲಿ ಒಂದು ಸಾಲಿನ ನಿರ್ಣಯವನ್ನೂ ಸಹ ಮಾಡಲಾಗಿತ್ತು. ಆದರೆ ಅಂದಿನ ರಾಜ್ಯಪಾಲರು ಸಂಪುಟದ ತೀರ್ಮಾನವನ್ನು ಒಪ್ಪದೆ ತಾವಾಗಿಯೇ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್ ಕೂಡಾ ಒಪ್ಪಿತ್ತು. ಆದರೆ ಈ ವೇಳೆ ಸುಪ್ರೀಂ ಕೋರ್ಟ್ ಯಾವುದೇ ಪ್ರಕರಣಗಳ ಬಗ್ಗೆ ಕೇಂದ್ರದ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂಬುದನ್ನು ಸಹ ಉಲ್ಲೇಖಿಸಿತ್ತು. ಇದನ್ನು ವಕೀಲರ ತಂಡ ರಾಜ್ಯಪಾಲರಿಗೆ ವಿವರಿಸಿದೆ.
ಸಂಪುಟದಲ್ಲಿ ನಿರ್ಣಯ ಅಂಗೀಕಾರವಾದರೂ ಆರ್ಟಿಕಲ್ 163ರಲ್ಲಿ ಉಲ್ಲೇಖವಾಗಿರುವಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಅಧಿಕಾರ ಹೊಂದಿದ್ದಾರೆ ಎಂದು ಕಾನೂನು ತಜ್ಷರು ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಗ್ಗೆ ರಾಜ್ಯಪಾಲರು ನೇರವಾಗಿ ತೀರ್ಮಾನ ತೆಗೆದುಕೊಳ್ಳಬಹುದು. ಆರ್ಟಿಕಲ್ 163ರಲ್ಲಿ ಈ ಬಗ್ಗೆ ಉಲ್ಲೇಖವಿದೆ. ಸಂಪುಟದ ಅಭಿಪ್ರಾಯ ಕೊಟ್ಟರೆ ಅನುಮೋದನೆ ಮಾಡಲೇಬೇಕು ಎಂಬ ನಿಯಮವಿಲ್ಲ. ಅವರು ಕೌನ್ಸಿಲ್ ಮಿನಿಸ್ಟರ್ ತೀರ್ಮಾನದ ವಿರುದ್ಧ ಅನುಮತಿ ನೀಡಬಹುದು ಎಂಬುದು ಕಾನೂನು ತಜ್ಞರ ವಾದವಾಗಿದೆ.
ಸಚಿವ ಸಂಪುಟ ತೀರ್ಮಾನವನ್ನು ಲೆಕ್ಕಿಸದೆ, ಪ್ರಾಸಿಕ್ಯೂಷನ್ ಗೆ ಕೊಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಅಕ್ರಮ ನಡೆದಿದೆ ಎಂಬುದು ಮನವರಿಕೆ ಆಗಿದ್ದರೆ ಕಾನೂನಿನ ಪ್ರಕಾರ ಸಂಪುಟದ ಅಭಿಪ್ರಾಯ ತೆಗೆದುಕೊಳ್ಳಬಹುದು. ಇಲ್ಲ ಸ್ವತಂತ್ರವಾಗಿ ಕೂಡ ತೀರ್ಮಾನ ಮಾಡಬಹುದು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿರುವುದಾಗಿ ಹೇಳಲಾಗಿದೆ.




