ಬೆಂಗಳೂರು:ಪುರಾಣ ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಾಲಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರೂಪಿಸಲಾಗಿದ್ದ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲರು ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಮಸೂದೆ ಹಿಂತಿರುಗಿಸಿದ್ದಾರೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಇದೊಂದೇ ಅಲ್ಲದೆ ಒಟ್ಟಾರೆಯಾಗಿ 11 ಮಸೂದೆಗಳಿಗೆ ಅಂಕಿತ ಹಾಕಲು ನಿರಾಕರಿಸಿ ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಈ ಮೂಲಕ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಇದೀಗ ರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂವರೆ ವರ್ಷಗಳ ನಂತರದಲ್ಲಿ ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ನೇರ ಸಂಘರ್ಷ ಏರ್ಪಟ್ಟಿದೆ.
ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆದಾಯ ಆದಾಯ ಹೆಚ್ಚಳಕ್ಕೆ ಅವಕಾಶ, ಉಪನೋಂದಣಿ ಕಚೇರಿಗಳಲ್ಲಿ ಜನ ದಟ್ಟಣೆ ಕಡಿಮೆ ಮಾಡಲು ಇ- ನೊಂದಣಿಗೆ ಅವಕಾಶ ನೀಡುವ ಮಸೂದೆಗಳನ್ನು ಕೂಡ ವಾಪಸ್ ಕಳುಹಿಸಿರುವುದು ಅಚ್ಚರಿ ಮೂಡಿಸಿದೆ.
ರಾಜ್ಯಪಾಲರು ಒಟ್ಟಾರೆಯಾಗಿ 11 ಮಸೂದೆಗಳನ್ನು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ಸವದತ್ತಿಯ ಯಲ್ಲಮ್ಮದೇವಸ್ಥಾನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಅನುವು ಮಾಡುವ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024 ಕ್ಕೆ ಅಂಕಿತ ಹಾಕುವಂತೆ ಕೋರಿ ರಾಜ್ಯಪಾಲರಿಗೆ ವಿಧೇಯಕವನ್ನು ಆ.6ಕ್ಕೆ ಕಳುಹಿಸಲಾಗಿತ್ತು.
ಆದರೆ ಈ ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲರು ಬಿಲ್ ಅನ್ನು ಆ.17ಗೆ ವಾಪಸು ಕಳುಹಿಸಿದ್ದಾರೆ. ಈಗಾಗಲೇ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕಾಯ್ದೆ 2023 ಜಾರಿಯಲ್ಲಿದೆ. ಅದೇ ಉದ್ದೇಶ ಹೊಂದಿರುವ ಹೊಸ ವಿದೇಯಕದ ಅಗತ್ಯತೆ ಏನಿದೆ? ಎಂದು ವಿವರಣೆ ಕೋರಿದ್ದಾರೆ.
ಅದೇ ರೀತಿಯಲ್ಲಿಯೇ ರಾಜ್ಯಪಾಲರು ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ 2023,ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, 2024
ಉಪ-ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಸರ್ಕಾರವು ಇ-ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2024
ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, 2024
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ 2024
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ 2024
ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣಾ) (ತಿದ್ದುಪಡಿ) ಮಸೂದೆ 2024 ಕ್ಕೆ ಅಂಕಿತ ಹಾಕಲು ನಿರಾಕರಿಸಿ ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ.




