ಬೆಂಗಳೂರು: ಸಾಮರಸ್ಯ ತಡೆಗಟ್ಟುವ ಹೆಸರಿನಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ದ್ವೇಷ ಭಾಷಣ ನಿಯಂತ್ರಣ ಮಸೂದೆ ದುರುದ್ದೇಶ ಪೂರ್ವಕದಿಂದ ಕೂಡಿದ್ದು ಯಾವುದೇ ಕಾರಣಕ್ಕೂ ಅದಕ್ಕೆ ಅಂಕಿತ ಹಾಕಬಾರದು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ತಾವರ್ ಚೆಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹಲವು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿತು.
ರಾಜಕೀಯ ಎದುರಾಳಿಗಳನ್ನು ಮಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಾಮರಸ್ಯ ಹೆಸರಿನಲ್ಲಿ ದ್ವೇಷ ಭಾಷಣ ನಿಯಂತ್ರಣ ಮಸೂದೆ ಜಾರಿಗೆ ತಂದಿದೆ ವಿಧಾನಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗೆ ಅವಕಾಶ ನೀಡದೆ ಏಕ ಪಕ್ಷಿಯವಾಗಿ ಧ್ವನಿ ಮತದ ಮೂಲಕ ಅನುಮೋದನೆ ಪಡೆದುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಈ ಮಸೂದೆಗೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದರು.
ಬೆಂಗಳೂರಿನ ಕೋಗಿಲು ಬಡಾವಣೆಯ ಸಂತ್ರಸ್ತರ ಹೆಸರಿನಲ್ಲಿ ಬಾಂಗ್ಲಾದೇಶದ ನಿವಾಸಿಗಳಿಗೆ ರಾಜ್ಯ ಸರ್ಕಾರ ಅಕ್ರಮವಾಗಿ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಿದೆ ವಸತಿ ಸೌಲಭ್ಯ ಕೋರಿ ಸಾವಿರಾರು ಮಂದಿ ವಸತಿರಹಿತರು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆಯಿಂದ ಮನೆಗಾಗಿ ಕಾಯುತ್ತಿದ್ದಾರೆ. ಇವರ ಅರ್ಜಿ ಪರಿಶೀಲಸದೆ ತುಷ್ಟಿಕರಣ ರಾಜಕಾರಣ ಮಾಡುತ್ತಿದೆ. ರಾಜ್ಯಪಾಲರು ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಕೋರಿದೆ.
ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ರಾಜ್ಯದಲ್ಲಿ ಕಾನೂನು ಸುಭ್ಯವಸ್ಥೆ ಸಂಪೂರ್ಣ ಅಡಗಿಟ್ಟಿದೆ ಗುಂಡಾ ರಾಜ್ಯವಾಗಿ ಕರ್ನಾಟಕ ಮಾರ್ಪಟ್ಟಿದೆ. ಅಕ್ರಮ ಲೆವಾದೇವಿಗಾರರು ಮೀಟರ್ ಬಡ್ಡಿ ಕೋರರು ಡ್ರಗ್ ಮಾಫಿಯಾದವರು ಎಗ್ಗಿಲ್ಲದಂತೆ ರಾಜಾರೋಷವಾಗಿ ಓಡಾಡುತ್ತಿದ್ದಾರೆ ಇವರ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ದ್ವೇಷ ಭಾಷಣ ನಿಯಂತ್ರಣ ಮಸೂದೆ ದುರುದ್ದೇಶದಿಂದ ಜಾರಿಗೊಳಿಸಿರುವ ಕಾನೂನಾಗಿದೆ ಈ ಮಸೂದೆ ಬಗ್ಗೆ ವಿಧಾನ ಮಂಡಲದಲ್ಲಿ ಯಾವುದೇ ಚರ್ಚೆಗೆ ಅವಕಾಶ ನೀಡಲಿಲ್ಲ ರಾಜ್ಯಪಾಲರ ಅಂಕಿತದೊಂದಿಗೆ ಇದು ಕಾನೂನಾಗಿ ಬಂದರೆ ಯಾರಿಗೂ ಉಳಿಗಾಲ ಇರುವುದಿಲ್ಲ ಎಂದು ಎಚ್ಚರಿಸಿದರು.
ಆಡಳಿತ ಪಕ್ಷ ಈ ಕಾನೂನನ್ನು ಹೇಗೆ ಬೇಕಾದರೂ ದುರುಪಯೋಗ ಮಾಡಿಕೊಳ್ಳಬಹುದು. ಕಣ್ಸನ್ನೆ ಮಾಡಿದರು ಸಾಕು ಪೊಲೀಸರು ಮಾಡಿದರೂ ಸಾಕು ಪೊಲೀಸರು ಯಾರನ್ನು ಬೇಕಾದರೂ ಬಂಧಿಸಬಹುದಾಗಿದೆ. ಹೀಗಾಗಿ ಇದೊಂದು ಅಪಾಯಕಾರಿ ಕಾನೂನು ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಹೀಗಾಗಿ ಅವರು ಮಸೂದೆಗೆ ಅಂಕಿತ ಹಾಕುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.




