ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 40225 ಕೆರೆಗಳು ಹಾಗೂ ಜಲಮೂಲಗಳ ಸಂರಕ್ಷಣೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಣ್ಣ ನೀರಾವರ ಸಚಿವ ಬೋಸರಾಜು ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಆಯೋಜಿಸಿದ್ದ ‘ನಮ್ಮ ಕೆರೆ-2025, ಆರೋಗ್ಯ ಕೆರೆಗಳು ಆರೋಗ್ಯಕರ ಜೀವಗಳು’ ಎಂಬ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಕೆರೆ ಸಂರಕ್ಷಣೆ ಒಂದು ಆಯ್ಕೆ ಅಲ್ಲ. ಅದು ಅವಶ್ಯಕತೆ. ಅದು ಅಭಿಯಾನವಲ್ಲ ಅದು ಜೀವಪಾಲನೆಯ ಹೊಣೆಗಾರಿಕೆಯಾಗಿದ್ದು, ಸುಸ್ತಿರ ಹಾಗೂ ಸಮೃದ್ಧ ಕರ್ನಾಟಕ ನಿರ್ಮಾಣದೆಡೆಗಿನ ನಮ್ಮ ನಡಿಗೆಯಲ್ಲಿ, ಜಲಮೂಲಗಳ ಪಾತ್ರ ಮಹತ್ವವಾಗಿದ್ದು, ಈ ನಿಟ್ಟಿನಲ್ಲಿ ಜಲ ಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ವತಿಯಿಂದ ಹಲವಾರು ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದರು.
ತ್ಯಾಜ್ಯ ನೀರಿನ ಪರಿಷ್ಕರಣೆಯ ಮೂಲಕ ಅಂತರ್ಜಲ ಹೆಚ್ಚಳದ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿ ಯೋಜನೆಗಳು ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿವೆ. ಈ ವಿಷಯದಲ್ಲಿ ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿಯಾಗಿದೆ. ನಮ್ಮ ಇಲಾಖೆಯ ಅಡಿಯಲ್ಲಿ ಜಲಮೂಲಗಳ ಸಂರಕ್ಷಣೆ, ಅಂತರ್ಜಲ ಅಭಿವೃದ್ಧಿ ಹಾಗೂ ರೈತರಿಗೆ ಅಗತ್ಯ ನೀರನ್ನು ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಕೆರೆಗಳನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರದ್ದಾಗಿದೆ. ನಮ್ಮ ಇಲಾಖೆಯಿಂದ ಕೆರೆಗಳ ಒತ್ತುವರಿ ತೆರವು ಹಾಗೂ ಅವುಗಳ ಸಂರಕ್ಷಣೆಯ ಕಾರ್ಯವನ್ನು ನಡೆಸಲಾಗುತ್ತಿದೆ. ಹೊಸ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಜ್ಯದಲ್ಲಿ ಸುಮಾರು 40225 ಜಲಮೂಲಗಳಿವೆ. ಕಳೆದ ಎರಡು ವರ್ಷಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಕೆರೆಗಳ ಒತ್ತುವರಿಯನ್ನು ತಗೆಸಲಾಗುತ್ತಿದೆ. ಈಗಾಗಲೇ ಸುಮಾರು 12 ಸಾವಿರ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಹಾಗೆಯೇ, ಸ್ವಚ್ಚತೆ ಕಾಪಾಡುವ ಹಾಗೂ ಅಂತರ್ಜಲ ಹೆಚ್ಚಿಸಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.




