ಅನ್ನಭಾಗಕ್ಕೆ ಮತ್ತೊಂದು ಸುತ್ತಿನ ಕಡಿತ ಮಾಡಿದ ರಾಜ್ಯ ಸರ್ಕಾರ

5 years ago

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಕೊಡಲಾಗುತ್ತಿರುವ ಅಕ್ಕಿಯಲ್ಲಿ ಕಡಿತಮಾಡಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅವಧಿಯಲ್ಲಿ ಜಾರಿಗೆ ತಂದಿದ್ದ ಈ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ 7ಕೆಜಿ ಅಕ್ಕಿ, ಗೋದಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ನೀಡಲಾಗುತ್ತಿತ್ತು.

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕೆಡವಿ, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 7 ಕೆಜಿಯಿಂದ 5ಕೆಜಿಗೆ ಇಳಿಸಲಾಗಿತ್ತು. ಇದೀಗ ಮತ್ತೊಂದು ಹಂತದಲ್ಲಿ ಕಡಿತಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, 3 ಕೆಜಿ ಕಡಿತಗೊಳಿಸಿ ಪ್ರತಿಯೊಬ್ಬ ವ್ಯಕ್ತಿಗೆ ತಲಾ 2 ಕೆಜಿ ಅಕ್ಕಿ, 3 ಕೆಜಿ ರಾಗಿ ನೀಡಲು ಮುಂದಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ, ಮನೆಯಲ್ಲಿ ದ್ವಿಚಕ್ರ ವಾಹನ, ಟಿವಿ ಇದ್ದವರು ಪಡಿತರ ಚೀಟಿಗಳನ್ನು ವಾಪಸ್ ನೀಡುವಂತೆ ಹೇಳಿ ವಿವಾದಕ್ಕೆ ಗುರಿಯಾಗಿದ್ದರು. ಮಧ್ಯಪ್ರವೇಶಿಸಿದ್ದ ಸಿಎಂ ಯಡಿಯೂರಪ್ಪ ವಿವಾದವನ್ನು ತಣ್ಣಗಾಗಿಸಿದ್ದರು. ಇದೀಗ ಮತ್ತೊಂದು ಸುತ್ತಿನ ವಿವಾದ ಎದ್ದಂತಾಗಿದೆ.

Leave a Reply