ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು. ಈ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್(ಅಭ್ಯಾಸ) ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಈ ಆದೇಶ ಉಲ್ಲಂಘಿಸುವ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಂಡಿರುವುದಾಗಿ ಹೇಳಿದರು.
9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.
ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ 1 ಗಂಟೆ ತಡವಾಗಿ ಬರುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದರು.
ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಇನ್ನು ಮುಂದೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್‌ಗೆ ತಮ್ಮ ಹಸ್ತಮುದ್ರೆ ಹಾಕಬೇಕು. ಬೆಳಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು 4 ಗಂಟೆಗೆ ಹಾಕಲೇಬೇಕು. ಇದರ ಆಧಾರದಲ್ಲಿಯೇ ಸಂಬಳವನ್ನು ನೀಡಲಾಗುವುದು. ಈ ಕುರಿತು ಮುಖ್ಯಸ್ಥರ ಜೊತೆಯೂ ಚರ್ಚೆ ಮಾಡಲಾಗಿದೆ. ರೋಗಿಗಳಿಗೆ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದರು.
ಪ್ರತಿಯೊಂದು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಒಪಿಡಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿದೆ. ಅಗತ್ಯವಿರುವ ರೋಗಿಗಳಿಗೆ ಒಪಿಡಿ ನೀಡಬೇಕೆಂದು ಸೂಚನೆ ಕೊಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಎಲ್ಲಿಯೂ ಕೊರತೆಯಾಗದಂತೆ ಕ್ರಮ ಕೈಗೊಂಡಿರುವುದಾಗಿ ಹೇಳಿದರು.




