- ದೆಹಲಿ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಈ ಕಾರಣದಿಂದಾಗಿ ದೇಶದ ಸರ್ಕಾರಿ ವೈದ್ಯಕೀಯ ಸೇವೆಯಲ್ಲಿ ಸಮಸ್ಯೆಯಾಗಲಿದೆ.
- ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವೈದ್ಯರು ನಾಳೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಇದರಿಂದ ಒಪಿಡಿ ಸೇವೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಲಿದೆ.
- ತುರ್ತು ಸೇವೆ, ಕೋವಿಡ್-19 ಸೇವೆ, ತುರ್ತು ನಿಗಾ ಘಟಕ ಸೇವೆ ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ವೈದ್ಯಕೀಯ ಸಂಘಟನೆ ಮಾಹಿತಿ ನೀಡಿದೆ.
- ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ವೈದ್ಯರು ಕಷ್ಟಕರ ಪರಿಸ್ಥಿತಿಗಳನ್ನು ಎದುರಿಸಿದರು. ಆಸ್ಪತ್ರೆಗಳು ಭರ್ತಿಯಾಗಿದ್ದರಿಂದ ಸೋಂಕಿತರನ್ನು ಉಳಿಸಿಕೊಳ್ಳಲು ವೈದ್ಯರು ಹಗಲಿರುಳೂ ಸೇವೆ ಸಲ್ಲಿಸಿದರು. ನಮ್ಮ ಸೇವೆಗೆ ಸರ್ಕಾರ ಕೋವಿಡ್ ಅಪಾಯ ಭತ್ಯೆ ನೀಡುವುದಾಗಿ ಘೋಷಿಸಿತ್ತು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಾವು ನಾಳೆ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವೈದ್ಯಕೀಯ ಸಂಘ ಹೇಳಿದೆ.




