ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಒಂದು ಕಡೆ ಹೆಸರು, ಸೂರ್ಯಕಾಂತಿ, ಉದ್ದಿನ ಕಾಳು, ಸೋಯಾಬೀನ್ ಬೆಳೆದ ರೈತರು ತಮ್ಮ ಫಸಲು ಮಾರಲಾಗದೆ ಸಂಕಷ್ಟದಲ್ಲಿದ್ದರೆ, ಮತ್ತೊಂದು ಕಡೆ ಕಬ್ಬು ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.
ಸ್ವಾಮಿ ಸಿಎಂ @siddaramaiah,
ಅಲಗಾಡುತ್ತಿರುವ ಕುರ್ಚಿಯಿಂದ ಹತಾಶರಾಗಿರುವ ತಾವು ತಾಳ್ಮೆ ಕಳೆದುಕೊಂಡು ಎಲ್ಲರ ಮೇಲೂ ಸಿಡಿಮಿಡಿ ಎನ್ನುತ್ತಿದ್ದೀರಿ. ನಾಯಕತ್ವ ಬದಲಾವಣೆ ಗೊಂದಲದಿಂದ ಸಚಿವರು, ಶಾಸಕರು ದಿಕ್ಕು ತೋಚದೆ ಹೈರಾಣಾಗಿ ಮನೆಯಿಂದ ಆಚೆ ಬರುತ್ತಿಲ್ಲ.
ಇನ್ನು ರೈತರು ತಮ್ಮ ಸಂಕಷ್ಟ ಯಾರ ಬಳಿ ಹೇಳಿಕೊಳ್ಳಬೇಕು ಸ್ವಾಮಿ?
ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸದ ಈ ರೈತವಿರೋಧಿ @INCKarnataka ಸರ್ಕಾರ ಇದ್ದರೆಷ್ಟು, ಹೋದರೆಷ್ಟು. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ.
– ಆರ್ ಅಶೋಕ್, ವಿಪಕ್ಷ ನಾಯಕ




