ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮೊದಲ ದಿನವೇ ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ನಿಲುವಳಿ ಸೂಚನೆ ಮಂಡಿಸಲು ಬಿಜೆಪಿ ತೀರ್ಮಾನಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್, ಅಧಿವೇಶನದ ಮೊದಲ ದಿನ ಉತ್ತರ ಕರ್ನಾಟಕದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಆದ ಬೆಳೆ ಹಾನಿ ಹಾಗೂ ಇತರೆ ವಿಚಾರಗಳ ಕುರಿತಂತೆ ಚರ್ಚೆಗೆ ನಿಳುವಳಿ ಸೂಚನೆ ಮಂಡಿಸಲಾಗುವುದು. ಆನಂತರ ಉತ್ತರ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳು ಕುಡಿಯುವ ನೀರಿನ ಯೋಜನೆಗಳು ಮತ್ತು ವಿವಿಧ ವಿಚಾರಗಳಲ್ಲಿ ಹಿಂದುಳಿದಿರುವಿದಕೆಯ ವಿಚಾರವನ್ನು ಪ್ರಸ್ತಾಪಿಸಲಾಗುವುದು ಎಂದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕಬ್ಬು ಬೆಳೆಗಾರರ ಸಮಸ್ಯೆ, ತೊಗರಿ ಹೆಸರು ಕಾಳು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಯ ಕುರಿತಾಗಿ ಮತ್ತೊಂದು ನಿಲುವಳಿ ಸೂಚನೆ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಅಧಿಕಾರಕ್ಕಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರು ಬಣಗಳಾಗಿ ವಿಭಜನೆಗೊಂಡಿದ್ದು, ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದ್ದು ಕೋಮಾದಲ್ಲಿದೆ ಎಂದರು.
ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಸಂಘರ್ಷ ನೋಡಿದರೆ ಯಾವುದೇ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಇಷ್ಟು ದಿನ ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ಹೈಕಮಾಂಡ್ ಗೆ ಎಲ್ಲ ಬಿಟ್ಟಿದ್ದು ಎನ್ನುತ್ತಿದ್ದಾರೆ. ಇನ್ನು ಡಿಸಿಎಂ ಶಿವಕುಮಾರ್, ಶಾಸಕರು ದೆಹಲಿಗೆ ಹೋದರೆ ತಪ್ಪೇನು ಎನ್ನುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅಸಹಾಯಕ ಆಗಿರುವುದನ್ನು ನೋಡಿದರೆ ಜಗಳ ಬೀದಿಗೆ ಬರುವಲ್ಲಿ ಯಾವುದೇ ಅನುಮಾನನಿಲ್ಲ ಎಂದರು.
ಸಿಎಂ ಕುರ್ಚಿ ಕಚ್ಚಾಟದಿಂದ ಸರ್ಕಾರ ಕೋಮಾಕ್ಕೆ ತೆರಳಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಭ್ರಷ್ಟಾಚಾರ ಮಿತಿ ಮೀರಿದ್ದರಿಂದ ಅಧಿಕಾರಿಗಳಿಗೆ ಯಾರೂ ಏನೂ ಕೇಳದಂತಾಗಿದೆ. ಕಾಂಗ್ರೆಸ್ ಅನ್ನು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ್ ಗಾಂಧಿ ಎಂಬ ಮೂವರು ಮಾತ್ರ ಆಳುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯ ನಂತರ ಈ ಹೈಕಮಾಂಡ್ ದುರ್ಬಲವಾಗಿದೆ. ಒಟ್ಟಾರೆ ಸಿಎಂ-ಡಿಸಿಎಂ ನಡುವೆ ಇದೇ ತೆರನಾಗಿ ಜಗಳ ಮುಂದುವರಿದರೆ ರಾಜ್ಯಪಾಲದ ಬಳಿ ಬಿಜೆಪಿ ನಿಯೋಗ ತೆರಳಲಿದೆ ಎಂದರು.
ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಲ್ಲಿ, ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸುವಲ್ಲಿ ಕಾಂಗ್ರೆಸ್ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ, ಆದ್ದರಿಂದ ವಿಧಾನಸಭೆಯನ್ನು ವಿಸರ್ಜಿಸಲು ಕಾಂಗ್ರೆಸ್ ಶಿಫಾರಸು ಮಾಡಬೇಕು. ಸರ್ಕಾರ ಬಿದ್ದರೆ ಭಾರತೀಯ ಜನತಾ ಪಕ್ಷ ಯಾವುದೇ ತೆರನಾದ ಸರ್ಕಾರಕ್ಕೆ ಬೆಂಬಲ ನೀಡದೇ, ಜತೆಗೆ ತೇಪೆ ಹಾಕುವ ಕಾರ್ಯಕ್ಕೆ ಕೈ ಜೋಡಿಸದೇ ಮಧ್ಯಂತರ ಚುನಾವಣೆ ಎದುರಿಸಲು ಸಿದ್ಧವಾಗಿದೆ, ಚುನಾವಣೆ ಎದುರಾಗಿದ್ದೇ ಆದರೆ, ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ಬಿಜೆಪಿಗಿದೆ ಎಂದರು.




