ಮಂಗಳೂರು: ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? ಎಂದು ಪ್ರಶ್ನಿಸಿದರು.
2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ನಾನಲ್ಲ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದರು.
ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಬೀರುವ ಪರಿಣಾಮವನ್ನು ಯೋಚಿಸಿ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದು ಸ್ಪಷ್ಟಪಡಿಸಿದರು.




