ಬೆಂಗಳೂರು: ಮೀನುಗಾರಿಕೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಸಲುವಾಗಿ ಕೃಷಿ ವಿಶ್ವವಿದ್ಯಾಲಯ ಮಾದರಿಯಲ್ಲಿ ಮೀನುಗಾರಿಕೆಗೂ ಪ್ರತ್ಯೇಕ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5 ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ ಎಂದರು.ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ. ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.
ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು ಎಂದು ಸಲಹೆ ನೀಡಿದರು.




