ಬಡವರ, ರೈತರ ನೋವಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತಿಲ್ಲ
ಬೆಂಗಳೂರು: ಸದಾಶಿವನಗರದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರ ಹುಟ್ಟುಹಬ್ಬದ ಆಚರಿಸಲಾಯಿತು. ಬಿ.ವೈ.ವಿಜಯೇಂದ್ರ ಅವರು ಕೇಕ್ ಕತ್ತರಿಸಿ ಸಿಹಿ ವಿತರಿಸಿದರು. ಶಾಸಕರಾದ ಮುನಿರಾಜು, ಸಿ.ಕೆ.ರಾಮಮೂರ್ತಿ ಮತ್ತು ಜಿಲ್ಲಾಧ್ಯಕ್ಷ ಎಸ್.ಹರೀಶ್, ಮಾಜಿ ಮೇಯರ್ ಗೌತಮ್ ಕುಮಾರ್, ದಕ್ಷಿಣ ಜಿಲ್ಲಾ ಉಪಾಧ್ಯಕ್ಷ ಕೆ.ಉಮೇಶ್ ಶೆಟ್ಟಿ, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಆನಂದ್, ಲಕ್ಷ್ಮಿನಾರಾಯಣ್ ಗುಂಡಣ್ಣ ಕಟ್ಟಾ ಜಗದೀಶ್, ಗಣೇಶ್ ರಾವ್ ಮಾನೆ ರವರು ಭಾಗವಹಿಸಿದ್ದರು.
- ಚಕ್ರವರ್ತಿ ಸೂಲಿಬೆಲೆ ಪೋಸ್ಟ್ಗೆ ನೆಟ್ಟಿಗರ ಸಖತ್ ತರಾಟೆ!
- ಬಿಎಂಟಿಸಿ ಪ್ರಯಾಣಿಕರಿಗೆ ಮತ್ತು ನಮ್ಮ ಬೆಂಗಳೂರಿಗೆ ಶುಭ ದಿನ: ಕೃಷ್ಣ ಬೈರೇಗೌಡ
- ₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ
- ಮಾಚಿದೇವ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತಿಮ್ಮಪ್ಪನ ದೇವಾಲಯದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂಬ ಸುದ್ದಿ ನಿಜವೇ?
ಇದೇ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಬಡವರ, ರೈತರ ನೋವಿಗೆ ಸ್ಪಂದಿಸದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರ ಮೌನವಾಗಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸುಭಿಕ್ಷೆಯಾಗಿದೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕಬ್ಬು ಬೆಳೆಗಾರರು ಕಳೆದ 8 ದಿನಗಳಿಂದ ಪ್ರತಿಭಟನೆ ಮಾಡಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಕಾಟಾಚಾರಕ್ಕೆ ಮಂತ್ರಿಗಳು ರೈತರನ್ನ ಭೇಟಿ ಮಾಡಿದ್ದಾರೆ. ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರು ಏಕಾಂಗಿಯಾಗಿ ಹೋರಾಟ ಮಾಡಿ ಕಬ್ಬನ ಬೆಂಬಲ ಬೆಲೆ 150 ರೂಪಾಯಿ ಹೆಚ್ಚಳ ಮಾಡಿಸಿದರು ಎಂದರು.
ಮಾಜಿ ಸಚಿವರು, ಶಾಸಕರುಗಳು ಮತ್ತು ಬಿಜೆಪಿ ಪಕ್ಷದ ಪ್ರಮುಖ ನಾಯಕರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



