ರಾಜ್ಯದ ಬೊಕ್ಕಸ ಬರಿದು ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಲು ಹಣವಿಲ್ಲದೆ ವಿವಿಗೆ ಬೀಗ ಹಾಕಿ, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ನಡೆಸುತ್ತಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಗ್ರಾಮೀಣ ಭಾಗಕ್ಕೂ ಕೂಡ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡುವ ದಿಶೆಯಲ್ಲಿ ಬಿಜೆಪಿ ಸರ್ಕಾರ ಕೊಪ್ಪಳ ಸೇರಿ 9 ವಿಶ್ವವಿದ್ಯಾಲಯ ಆರಂಭಿಸಲು ಅಧಿವೇಶನದಲ್ಲಿ ವಿಧೇಯಕ ಮಂಡಿಸಿ, ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಅದರಂತೆ ಕೊಪ್ಪಳ ವಿವಿ ಕಾರ್ಯಾರಂಭವಾಗಿತ್ತು. ಆದರೆ, ಎರಡೇ ವರ್ಷದಲ್ಲಿ ವಿವಿ ಮುಚ್ಚಲು ಸಿದ್ದರಾಮಯ್ಯ ಅವರ ಸರ್ಕಾರ ತೀರ್ಮಾನ ಮಾಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವಾದ ಕೊಪ್ಪಳ ವಿವಿ ಮುಚ್ಚಿದ ಪರಿಣಾಮ 12,000 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ರಾಜ್ಯ ಸರ್ಕಾರ ತಕ್ಷಣವೇ ಈ ಕೆಟ್ಟ ನಿರ್ಧಾರವನ್ನು ಕೈ ಬಿಟ್ಟು 9 ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿವಿಯನ್ನು ಉಳಿಸುವ ಕೆಲಸವನ್ನು ಮಾಡಬೇಕು.
– ಬಿಜೆಪಿ



