ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಸವಾಲು ಹಾಕಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸತ್ಯಹರಿಶ್ಚಂದ್ರನ ಮಕ್ಕಳು ಎಂದು ಹೇಳಿಕೊಳ್ಳುವ ಸಚಿವರು ಮೊದಲು ಈ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಟೆಂಡರ್ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಹೋಗುತ್ತಿವೆ ಎಂದು ಆರೋಪಿಸಿದ ಅವರು, ಕೆಕೆಆರ್ಡಿಬಿ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಪ್ರತಿಯೊಂದು ಕಾಮಗಾರಿಗು ಇಂತಿಷ್ಟು ಕಮಿಷನ್ ಎಂದು ನಿಗದಿ ಮಾಡಲಾಗಿದೆ ಈ ಕಮಿಷನ್ ಕೊಡುವುದು ಕಡ್ಡಾಯ ಇಲ್ಲವಾದರೆ ಗುತ್ತಿಗೆದಾರರಿಗೆ ಮಾಡಲು ಕೆಲಸವೇ ಸಿಗುವುದಿಲ್ಲ ಎಂದರು.
ಕಸದ ಟೆಂಡರ್ ಪಡೆಯಲು ಶೇಕಡ 7% ಕಮಿಷನ್, ಬಿಲ್ ಬಿಡುಗಡೆಗೆ 7% ಹಾಗೂ ವಿಶೇಷ ಎಲ್ಒಸಿ ಪಡೆಯಲು 7% ನೀಡಬೇಕಾಗಿದೆ. ಇದರಿಂದ ಒಟ್ಟಾರೆ 21% ಕಮಿಷನ್ ಸರ್ಕಾರಕ್ಕೆ ಹೋಗುತ್ತಿದೆ. ಇಂಜಿನಿಯರ್ಗಳಿಗೆ ಬೇರೆ ಕಮೀಷನ್ ನೀಡಬೇಕಾಗುತ್ತಿದೆ, ಕಸದ ಸಮಸ್ಯೆಗೆ ಸರ್ಕಾರದ ‘ಮಾಫಿಯಾ’ವೇ ಕಾರಣ ಎಂದರು.




