ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ

5 years ago

ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಗೊಳಿಸಿ ಮಹತ್ವದ ಆದೇಶ

ಹೆಚ್ಚು ವಸೂಲಿ ಮಾಡಿದರೆ ಕ್ರಮ : ಸಚಿವ ಸುಧಾಕರ್

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ.

ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಸರಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

Leave a Reply