ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಪ್ರಶ್ನಿಸಿದರು.
ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದರು.




