ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ ಹಗರಣವನ್ನು ಸಿಬಿಐ ತನಿಖೆಗೆ ಸಿದ್ಧತೆ: ಎಸ್.ಟಿ.ಸೋಮಶೇಖರ್

4 years ago

ಬೆಂಗಳೂರು: ಸಾಲ ನೀಡುವ ವಿಚಾರದಲ್ಲಿ ಧಾರವಾಡ, ವಿಜಯಪುರ, ಶಿವಮೊಗ್ಗ, ಕೋಲಾರ ಬ್ಯಾಂಕ್‍ಗಳಲ್ಲಿ
ಅಕ್ರಮ ನಡೆದಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಇಲಾಖೆಯ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಬಾರ್ಡ್ ನಿಯಮ ಪ್ರಕಾರ ಇಲ್ಲಿ ಸಾಲ ನೀಡಲಾಗಿದೆ. ಅವ್ಯವಹಾರ ನಡೆಯುವ ಸಾಧ್ಯತೆಗಳು ಕಡಿಮೆ ಎಂದರು.

ಐದು ಬ್ಯಾಂಕ್ ಹೊರತು ಪಡಿಸಿದರೆ ಉಳಿದೆಡೆ ನಬಾರ್ಡ್ ಮತ್ತು ನಮ್ಮ ಇಲಾಖೆ ನಿಯಮದ ಅನುಸಾರವೇ ಸಾಲ ನೀಡಲಾಗುತ್ತಿದೆ. ಸಾಫ್ಟವೇರ್ ಬದಲಾವಣೆ ಮಾಡಲಾಗಿದ್ದು, ಹೊಸ ವ್ಯವಸ್ಥೆಯಲ್ಲಿ ವಂಚನೆ ಮಾಡಲು ಸಾಧ್ಯವಿಲ್ಲ. ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೋಲಾರದ ವ್ಯವಸ್ಥಾಪಕರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಶೀಘ್ರವೇ ಗೃಹ ಇಲಾಖೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಿಒಡಿ, ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಹಗರಣವನ್ನು ತನಿಖೆ ನಡೆಸಿವೆ. ಈವರೆಗೂ 1290 ಕೋಟಿ ವಂಚನೆಯನ್ನು ಪತ್ತೆ ಹಚ್ಚಿವೆ. ಸಿಒಡಿ ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸಿಬಿಐಗೆ ಒಪ್ಪಿಸಿದರೆ ತನಿಖೆ ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ತಡೆ ಹಿಡಿಯಲಾಗಿತ್ತು ಎಂದು ಹೇಳಿದರು.

ಮೂರು ವರ್ಷದಿಂದ ಸಿಒಡಿ ಮತ್ತು ಸಹಕಾರ ಇಲಾಖೆ ತನಿಖೆ ನಡೆಸಿ ಏನೆಲ್ಲಾ ಅವ್ಯವಹಾರ ನಡೆದಿದೆ ಎಂಬ ಇಂಚಿಂಚು ಮಾಹಿತಿ ಕಲೆ ಹಾಕಿದ್ದಾರೆ. ಆ ಮಾಹಿತಿಯನ್ನು ಸರ್ಕಾರ ಪರಿಶೀಲನೆ ಮಾಡುತ್ತಿದೆ. ಮುಂದಿನ ಹಂತದಲ್ಲಿ ಸಿಬಿಐ ತನಿಖೆ ನೀಡಲು ತಯಾರಾಗಿದ್ದೇವೆ. ಸಿಬಿಐ ಏನೆಲ್ಲಾ ದಾಖಲೆಗಳನ್ನು ಕೇಳುತ್ತಾರೆ ಎಂಬ ನಿರೀಕ್ಷೆ ಮೇಲೆ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ್ದೇವೆ ಎಂದರು.

ಇಷ್ಟೆಲ್ಲಾ ತನಿಖೆ ಮಾಡಿದರೂ ವಂಚನೆ ಯಾರು ಮಾಡಿದ್ದಾರೆ ಎಂದು ಕಂಡು ಹಿಡಿಯಲಾಗುತ್ತಿಲ್ಲ. ಇಡಿಯವರೂ ವಿಚಾರಣೆ ಮಾಡಿದ್ದಾರೆ. ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಲಿದೆ ಎಂಬ ಮಾಹಿತಿಯನ್ನು ಪರಿಶೀಲನೆ ನಡೆಸಿದ್ದಾರೆ. ಗೃಹ ಇಲಾಖೆಗೆ ಎರಡು ಮೂರು ದಿನಗಳಲ್ಲಿ ಕಡತ ರವಾನೆಯಾಗಲಿದೆ. ನಂತರ ಸಿಬಿಐ ತನಿಖೆಗೆ ಒಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

Leave a Reply