ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸ್ವೀಕರಿಸದಿರುವುದು ಖಂಡನೀಯ: ಸಿದ್ದರಾಮಯ್ಯ

5 years ago

ಕೋಲಾರ: ರಾಜ್ಯದಲ್ಲಿ ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕೋಲಾರದಲ್ಲಿ ಮಾತಾಡಿದ ಅವರು, ಸ್ವಾತಂತ್ರ್ಯ ನಂತರದಿಂದ ಈ ವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಿದರು.

ಬೆಂಗಳೂರು ನಗರದ ಶೇ.90 ಹಾಗೂ ರಾಜ್ಯದ ಗ್ರಾಮೀಣ ಭಾಗದ ಶೇ.100 ರಷ್ಟು ಕುಟುಂಬಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಮಾಹಿತಿ ಇರುವ ವೈಜ್ಞಾನಿಕ ಸಮೀಕ್ಷೆಯೊಂದರ ವರದಿ ಸ್ವೀಕರಿಸದಿರಲಿ ಕಾರಣ ಏನು ಎಂಬುದನ್ನು ರಾಜ್ಯ ಸರ್ಕಾರ ಹೇಳಲಿ ಎಂದು ಸವಾಲೆಸೆದರು.

ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹವಿದ್ದಾವೆ ಅವುಗಳೆಲ್ಲವಕ್ಕೂ ಸರ್ಕಾರ ಮೀಸಲಾತಿ ನೀಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

Leave a Reply