ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು: ಪ್ರಜ್ವಲ್ ರೇವಣ್ಣ

6 years ago

ಬೆಂಗಳೂರು: ಸಾರಿಗೆ ನೌಕರರು ಈ ಹಿಂದೆ ಪ್ರತಿಭಟನೆ ನಡೆಸಿದಾಗ ಇದೇ ಸಾರಿಗೆ ಸಚಿವರ ಲಿಖಿತ ಭರವಸೆ ನಂತರ ಪ್ರತಿಭಟನೆ ಕೈಬಿಟ್ಟಿದ್ದರು, ಆದರೆ ಸರ್ಕಾರ ಅವರ ಬೇಡಿಕೆಯನ್ನ ಈಡೇರಿಸಲಿಲ್ಲ, ಈಗ ಸರ್ಕಾರ ಕೂಡಲೇ  ಕಾರ್ಯೋನ್ಮುಖವಾಗಿ ನೌಕರರ ಜೊತೆ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪರಿಹಾರ ಕಂಡುಕೊಳ್ಳಬೇಕು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ 8 ದಿನಗಳಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು ಜನಜೀವನದ ಮೇಲೆ ದುಷ್ಪರಿಣಾಮವಾಗಿದೆ. ಜೊತೆಗೆ, ಸರ್ಕಾರ ಮತ್ತು ನೌಕರರು ಪಟ್ಟು ಬಿಡದೆ ಇರುವುದರಿಂದ ಸಮಸ್ಯೆ ನಿಯಂತ್ರಣವಾಗಿಲ್ಲ. ಇಂದು ಸಂಜೆ 6 ಗಂಟೆಗೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಸಿದ್ದರಾಗಿದ್ದರೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ರೇವಣ್ಣ, ಸಾರಿಗೆ ನೌಕರರ ಬೇಡಿಕೆಗಳನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ, ನೌಕರರ ಬಹುತೇಕ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ ಎಂದಿದ್ದಾರೆ.

ಸರ್ಕಾರದ ಬೇಜವಾಬ್ದಾರಿ ನಿರ್ಲಕ್ಷ್ಯ ಧೋರಣೆ ಇಂದು ರಾಜ್ಯದ ಪ್ರಯಾಣಿಕರನ್ನು ಸಂಕಷ್ಟಕ್ಕೆ ದೂಡಿದೆ, ಸಾರಿಗೆ ನೌಕರರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಶಕ್ತಿಯುತವಾಗಿದೆ ಎಂದು ಅವರು ಹೇಳಿದ್ದಾರೆ.

Leave a Reply