ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರು ಏರಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಮೊದಲಾದ ಪ್ರಮುಖರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸುತ್ತಾ ಸೈಕಲ್ ಯಾತ್ರೆ ಆರಂಭಿಸಿದರು. ಈ ಜಾಥಾ ಸ್ವಲ್ಪ ದೂರ ಸಾಗುತ್ತಿದ್ದಂತೆ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದರು.
ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿಗಳು ಪೆಟೋಲ್-ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು. ಇಲ್ಲದೇ ಹೋದಲ್ಲಿ ಬಿಜೆಪಿ ಇದರ ವಿರುದ್ಧ ರಾಜ್ಯಾದ್ಯಂತ ಆಂದೋಲನ ರೂಪಿಸಲಿದೆ ಎಂದರು.
ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ಸರ್ಕಾರ ತಕ್ಷಣ ಕೈಬಿಡಬೇಕು. ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ. ರಾಜ್ಯ ಸರ್ಕಾರ ಕೇವಲ ತೈಲೋತ್ಪನ್ನಗಳ ಬೆಲೆ ಮಾತ್ರ ಹೆಚ್ಚಿಸಿಲ್ಲ. ಸದ್ಯದಲ್ಲೇ ಕುಡಿಯುವ ನೀರು, ಬಸ್ ಪ್ರಯಾಣ ದರ ಎಲ್ಲವನ್ನೂ ಹೆಚ್ಚಳ ಮಾಡುವ ಮೂಲಕ ಜನ ಸಾಮಾನ್ಯರಿಗೆ ಹೊರೆ ಹಾಕಲು ಹೊರಟಿದೆ. ಆದರೆ ಬಿಜೆಪಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.









