ಬೆಳಗಾವಿ: ಪಂಚಮಸಾಲಿ ಸಮುದಾಯಯ ಮೀಸಲಾತಿಗೆ ಸಂಬಂಧಿಸಿ ಎಲ್ಲರಿಗೂ ಒಪ್ಪುವ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ನೀಡಲಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಪಂಚಮಸಾಲಿ ಸಮಾಜದ ಮೇಲೆ ಲಾಠಿ ಪ್ರಹಾರದ ವಿಚಾರವಾಗಿ ಮಾತನಾಡಿ, ಸರ್ಕಾರಿ, ಸಾರ್ವಜನಿಕ ಆಸ್ತಿ ಕಾಪಾಡಿಕೊಳ್ಳುವಂತದ್ದು, ಯಾರಿಗೆ ಕೂಡ ತೊಂದರೆಯಾಗದಂತೆ ನೋಡಿಕೊಂಡು ಜನರಿಗೆ ರಕ್ಷಣೆ ಕೊಡುವಂತದ್ದು, ಯಾವುದೇ ಸರ್ಕಾರ ಇದ್ದರೂ ಕೂಡ ಅವರಿಗೆ ಇರುವಂತ ಮೂಲ ಸದುದ್ದೇಶ ಎಂದರು.
ಸರ್ಕಾರಿ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವುದು, ಸಾರ್ವಜನಿಕರಿಗೆ ತೊಂದರೆ ಕೊಟ್ಟಾಗ ಪೊಲೀಸ್ ಇಲಾಖೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತದೆ. ಆ ಬಗ್ಗೆ ನಾವು ಟೀಕೆ ಮಾಡುವುದು ಸರಿಯಲ್ಲ ಎಂದರು.
ಒಮ್ಮೆ ಎಲ್ಲ ಊಹೆ ಮಾಡಿ, ಪೊಲೀಸರು ಕ್ರಮ ತೆಗೆದುಕೊಳ್ಳದೇ, ಎಲ್ಲಾ ಪ್ರತಿಭಟನಾಕಾರರು ವಿಧಾನಸಭೆಗೆ ನುಗ್ಗಿ ಬಿಟ್ಟಿದ್ದರೆ ಏನು ಆಗುತ್ತಿತ್ತು ಹೇಳಿ. ಅದು ಆಗಬಾರದು ಎನ್ನುವ ಮುನ್ನೆಚ್ಚರಿಕೆಯಿಂದ ಪೊಲೀಸರು ಆ ಕ್ರಮ ತೆಗೆದುಕೊಂಡಿದ್ದಾರೆ ಎಂದರು.
ಹಿಂದುಳಿದ ವರ್ಗಗಳಿಂದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಬೇಡಿ ಎಂದು ಸಿಎಂ ಮನವಿ ಪತ್ರ ಕೊಟ್ಟಿರುವ ವಿಚಾರವಾಗಿ ಮಾತನಾಡಿದ ಅವರು, ಎಲ್ಲರಿಗೂ ಒಪ್ಪುವ ರೀತಿ ಸರ್ಕಾರ ತೀರ್ಮಾನ ಮಾಡುತ್ತದೆ. ಏನೆಲ್ಲ ಸಲಹೆ ಬರುತ್ತವೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.



