ಹುಬ್ಬಳ್ಳಿ: ನಗರದ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಚಾರಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ, ತಜ್ಞ ವೈದ್ಯರ ತಂಡದಿಂದ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವ ಸಂತೋಷ್ ಲಾಡ್, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು, ಕೆಎಂಸಿಆರ್ಐ ನಿರ್ದೇಶಕ ಡಾ. ಎಸ್.ಎಫ್.ಕಮ್ಮಾರ, ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮೊದಲಾದವರು ಹಾಜರಿದ್ದರು.




