ಮೈಸೂರು: ಆಸ್ಟ್ರೇಲಿಯಾದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿರುವ ಡಾ ಜಿ ಪರಮೇಶ್ವರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಮಾಡುತ್ತಿದ್ದು ಅದರ ಮುಂದುವರಿಕೆಯ ಭಾಗವಾಗಿ ಇಂದು ಮೈಸೂರಿನ ನಗರದಲ್ಲಿ ಕ್ವೆಸ್ಟ್ ಅಕಾಡೆಮಿಯನ್ನು ಸ್ಥಾಪಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ನೇತೃತ್ವದಲ್ಲಿ ಜರುಗಿದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕ್ವೆಸ್ಟ್ ಅಕಾಡೆಮಿ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, 1959ರಲ್ಲಿ ಆರಂಭಗೊಂಡಿರುವ ಇವರ ಶೈಕ್ಷಣಿಕ ಸೇವೆಯು ಡಾ ಜಿ ಪರಮೇಶ್ವರ್ ಅವರ ತಂದೆಯವರ ಸಂದರ್ಭದಿಂದಲೂ ಸಾಕಷ್ಟು ಸೇವೆಯನ್ನು ಮಾಡುತ್ತಿದ್ದು, ಈಗಲೂ ಅದನ್ನು ಮುನ್ನಡೆಸುತ್ತಾ ಲಕ್ಷಾಂತರ ವಿದ್ಯಾರ್ಥಿಗಳ ಬದುಕಲ್ಲಿ ಬೆಳಕನ್ನು ಮೂಡಿಸಿದ್ದಾರೆ ಎಂದರು.
ನೂರು ವರ್ಷಗಳ ಹಿಂದೆ ಬಹಿಷ್ಕೃತ ಹಿತಕಾರಿಣಿ ಸಭೆಯನ್ನು ಆರಂಭಿಸಿದ್ದ ಬಾಬಾ ಸಾಹೇಬರು ಶಿಕ್ಷಣದ ಮೂಲಕ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಅಂಶಗಳನ್ನು ಸಮಾಜದ ಒಳಗೆ ಬಿತ್ತಬೇಕೆಂದು ಬಯಸಿದ್ದರು ಎಂದು ಹೇಳಿದರು.
ಈ ಹಿನ್ನಲೆಯಲ್ಲಿ ಸಿದ್ಧಾರ್ಥ ಸಂಸ್ಥೆಗಳು ಗುಣಮಟ್ಟದ ಶಿಕ್ಷಣದ ಜೊತೆಗೆ ಎಲ್ಲ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ಕೆಲಸ ಮಾಡುತ್ತಿದ್ದು ಡಾ ಪರಮೇಶ್ವರ್ ಅವರ ಕ್ವೆಸ್ಟ್ ಶಿಕ್ಷಣ ಸಂಸ್ಥೆಗೆ ಮೈಸೂರಿನ ಜನರು ಬೆಂಬಲ ನೀಡುತ್ತಾರೆ ಎಂದು ಆಶಿಸುತ್ತಾ ಸಂಸ್ಥೆಯ ಯಶಸ್ಸಿಗೆ ಶುಭ ಕೋರಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಪಿರಿಯಾಪಟ್ಟಣ ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್,ಎ ಆರ್ ಕೃಷ್ಣಮೂರ್ತಿ, ಪರಿಷತ್ ಸದಸ್ಯ ಡಾ ಡಿ ತಿಮ್ಮಯ್ಯ, ಮಾಜಿ ಸಚಿವರಾದ ಹೆಚ್ ಕೆ ಕುಮಾರಸ್ವಾಮಿ, ಪರಮೇಶ್ವರ್ ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಸೇರಿದಂತೆ ಸಿದ್ಧಾರ್ಥ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.




