ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಮೇಲೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಘಟನೆಯಲ್ಲಿ, ಭೀಮನಗೌಡನ ತಲೆ ಹಾಗೂ ಎದೆಗೆ ಗುಂಡುಗಳು ತಗುಲಿ ಗಂಭೀರವಾಗಿ ಗಾಯಗೊಂಡಿದ್ದು,ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಭೀಮನಗೌಡ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದಾನೆ. ಮೂರರಿಂದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭೀಮನಗೌಡ ಬಿರಾದಾರ್ ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ನಲ್ಲಿ ಕ್ಷೌರ ಮಾಡಿಸಿಕೊಳ್ಳಲು ಆಗಮಿಸಿದ್ದ ವೇಳೆ ಈ ದಾಳಿ ನಡೆದಿದೆ. ಕಟಿಂಗ್ ಮಾಡುತ್ತಿದ್ದ ಅಂಗಡಿಗೆ ಖಾರದ ಪುಡಿ ಎರಚಲಾಗಿದೆ. ಕಣ್ಣಿಗೆ ಖಾರದ ಪುಡಿ ಬಿದ್ದು ಅಂಗಡಿಯಲ್ಲಿದ್ದವರೆಲ್ಲ ಕಣ್ಣು ಉಜ್ಜಿಕೊಳ್ಳುತ್ತಿರುವಾಗಲೇ ಈ ಕೃತ್ಯ ಎಸಗಲಾಗಿದೆ.
ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡ ಭೀಮನಗೌಡನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಮಾರ್ಗ ಮಧ್ಯೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ, ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇದರಿಂದ ದೇವರನಿಂಬರಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.




