ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಿಬಿಎಂಪಿ ನೌಕರರ ಕನ್ನಡ ಸಂಘದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ
ಹರಿದ್ವಾರ, ಋಷಿಕೇಶದ ಸನ್ನಿಧಿಯಲ್ಲಿ ನವಂಬರ್ 16ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವದ ಲಾಂಛನ, ಭಿತ್ತಿಪತ್ರ ಬಿಡುಗಡೆ
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಬಿಬಿಎಂಪಿ ನೌಕರರ ಕನ್ನಡ ಸಂಘದ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಉತ್ತರಾಖಂಡ್ ರಾಜ್ಯದ ಹರಿದ್ವಾರ ಮತ್ತು ಋಷಿಕೇಶದ ಗಂಗಾ ನದಿ ತೀರದಲ್ಲಿ ನವಂಬರ್ 16ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಲಾಂಛನ ಮತ್ತು ಭಿತ್ತಿಪತ್ರ(ಪೋಸ್ಟರ್) ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕನ್ನಡ ಧ್ವಜಾರೋಹಣ ಮಾಡಿ ಮೇರುನಟ ಡಾ.ರಾಜ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಆಡಳಿತಗಾರ ಎಸ್.ಆರ್.ಉಮಾಶಂಕರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಮಾಜಿ ಮೇಯರ್ ಜೆ.ಹುಚ್ಚಪ್ಪ, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಉಪ ಆಯುಕ್ತ ಮಂಜುನಾಥ ಸ್ವಾಮಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಜಂಟಿ ಆಯುಕ್ತರಾದ ಲಕ್ಷ್ಮಿದೇವಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್, ಬಿಬಿಎಂಪಿ ನೌಕರರ ಕನ್ನಡ ಸಂಘದ ಅಧ್ಯಕ್ಷ ಸಾಯಿಶಂಕರ್ ರವರು ಪದಾಧಿಕಾರಿಗಳು ಲಾಂಛನ, ಭಿತ್ತಿ ಪತ್ರ (ಪೋಸ್ಟರ್) ಅನಾವರಣಗೊಳಿಸಿದರು.
ಎಸ್.ಆರ್.ಉಮಾಶಂಕರ್ ಮಾತನಾಡಿ, ಬೆಂಗಳೂರು ಇಡಿ ದೇಶದ ಪ್ರಮುಖ ನಗರ, ರಾಜ್ಯದ ಹೆಮ್ಮೆಯ ನಗರವಾಗಿದೆ. ಕನ್ನಡ ಭಾಷೆಯನ್ನು ಎತ್ತಿಹಿಡಿಯುವ ಕೆಲಸ ಬಿಬಿಎಂಪಿ ಉತ್ತಮವಾಗಿ ನಿರ್ವಹಣೆ ಮಾಡುತ್ತಿದೆ ಎಂದರು.
ಕನ್ನಡ ಆಡಳಿತ ಭಾಷೆಯಾಗಿದೆ, 6.5 ಕೋಟಿ ಜನರ ಮನದಾಳದ ಭಾಷೆಯಾಗಿದೆ. ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿ ಬಂದಿದೆ. ರಾಜ್ಯದ ಬೆಂಗಳೂರುನಗರದಲ್ಲಿ ಕನ್ನಡ ಭಾಷೆ ಬಳಕೆ ಕಡಿಮೆ ಇರಬಹುದು ಹಳ್ಳಿ, ಗ್ರಾಮ, ತಾಲ್ಲೂಕು ಮಟ್ಟದಲ್ಲಿ ಕನ್ನಡ ಭಾಷೆ ಹೆಚ್ಚು ಬಳಕೆಯಾಗುತ್ತಿದೆ. ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿ ಜಾರಿಗೆ ತರಲಾಗುತ್ತಿದೆ ಎಂದರು.
ತುಷಾರ್ ಗಿರಿನಾಥ್ ಮಾತನಾಡಿ, ಈ ವರ್ಷ ವಿಶೇಷವಾಗಿ ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಅಚರಿಸಲಾಗುತ್ತಿದೆ. ಉಪಮುಖ್ಯಮಂತ್ರಿ ಸಾಮಾಜಿಕ ಜಾಲತಾಣದ ಮೂಲಕ ಐ.ಟಿ. ಬಿಟಿ ಮತ್ತು ವಾಣಿಜ್ಯ ಮಳಿಗೆಗಳು ಕನ್ನಡ ಬಾವುಟ ಪ್ರದರ್ಶನ ಮಾಡಬೇಕು ಎಂದು ಕಟ್ಟಪ್ಪಣೆ ನೀಡಲಾಗಿದೆ. ಕನ್ನಡ ಭಾಷೆ ಸಂಪೂರ್ಣ ಬಳಕೆ ಮಾಡಬೇಕು. ಕನ್ನಡ ಭಾಷೆ ಬಳಸಿ, ಬೆಳಸಬೇಕು, ಬಿಬಿಎಂಪಿಯಲ್ಲಿ ಸಂಪೂರ್ಣ ಆಡಳಿತ ವ್ಯವಹಾರ ಕನ್ನಡ ನಡೆಯುತ್ತದೆ ಎಂದರು.
ಜೆ.ಹುಚ್ಚಪ್ಪ ಮಾತನಾಡಿ, ಕನ್ನಡ ಭಾಷೆ ಉಳಿಸಿ, ಬೆಳಸಲು ಅಧಿಕಾರಿಗಳು ಪರಿಶ್ರಮ ಮುಖ್ಯ, ಕನ್ನಡದಲ್ಲಿ ನಾಮಫಲಕ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಿ ಎಂದು ನೋಟಿಸ್ ಕೊಡಿ, ನೋಟಿಸ್ ಮಣಿಯದೇ ಹೋದರೆ ವಾಣಿಜ್ಯ ಮಳಿಗೆಗಳಿಗೆ ಬೀಗ ಜಡಿಯಬೇಕು ಎಂದರು.
ಎ.ಅಮೃತ್ ರಾಜ್ ಮಾತನಾಡಿ, ಕನ್ನಡ ಭಾಷೆ ಉಳಿಸಿ, ಬೆಳಸಬೇಕು, ಕನ್ನಡ ಭಾಷೆ ವಿಶ್ವ ಭಾಷೆಯಾಗಬೇಕು ಎಂಬ ನಿಟ್ಟಿನಲ್ಲಿ ಸಂಘದ ವತಿಯಿಂದ ಉತ್ತರಾಖಂಡ್ ರಾಜ್ಯದಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನವಂಬರ್ 16ನೇ ತಾರೀಖು ಹಮ್ಮಿಕೊಳ್ಳಲಾಗಿದೆ ಎಂದರು.
ಹಿಂದೆ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವವನ್ನು ನೇಪಾಳದಲ್ಲಿ ಹಾಗೂ ಕಾಶಿಯಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಅಚರಿಸಲಾಯಿತು. ಕನ್ನಡ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಾಜ್ಯದಿಂದ ಹೊರ ರಾಜ್ಯ, ರಾಷ್ಟ್ರಗಳಿಗೆ ಪರಿಚಯಿಸುವ ವಿಶ್ವವ್ಯಾಪಿಯಲ್ಲಿರುವ ಕನ್ನಡಿಗರನ್ನು ತಲುಪುಬೇಕು ಮತ್ತು ಕನ್ನಡೇತರಿಗೆ ಕನ್ನಡ ನಾಡಿನ ಪರಿಚಯ, ಕನ್ನಡ ಭಾಷೆ ಕಲಿಸುವ ಕಾರ್ಯಕ್ರಮ ನಮ್ಮ ಸಂಘಟನೆಯಿಂದ ಮಾಡಲಾಗುತ್ತಿದೆ ಎಂದರು.
ಸಂಘದ ಪದಾಧಿಕಾರಿಗಳಾದ ಬಾಬಣ್ಣ, ಡಾ.ಶೋಭಾ, ಡಿ.ರಾಮಚಂದ್ರ, ಕೆ.ಜಿ.ರವಿ, ರುದ್ರೇಶ್ ಬಿ., ಸೋಮಶೇಖರ್ ಎನ್.ಎಸ್., ಹೆಚ್.ಕೆ.ತಿಪ್ಪೇಶ್, ಹರೀಶ್ ಹೆಚ್.ಬಿ., ನರಸಿಂಹ, ಮಂಜೇಗೌಡ, ಆರ್.ರೇಣುಕಾಂಬ, ಎಸ್.ಜಿ.ಸುರೇಶ್, ಮಂಜುನಾಥ್, ಉಮೇಶ್ ವಿ, ಸಂತೋಷ್ ಕುಮಾರ್ ನಾಯ್ಕ್, ಶ್ರೀಧರ್, ಸಂತೋಷ್ ಕುಮಾರ್ ಹಾಜರಿದ್ದರು.




