ದಾವಣಗೆರೆ: ಸಂಖ್ಯಾಶಾಸ್ತ್ರಕ್ಕೆ ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಪ್ರೊ. ಪಿ.ಸಿ ಮಹಾಲನೋಬಿಸ್ ಎಂದು ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ತಿಳಿಸಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಪ್ರೊ.ಪಿ.ಸಿ.ಮಹಾಲನೋಬಿಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮ ಮಾತನಾಡಿದ ಅವರು, ಮಹಾಲನೋಬಿಸ್‌ರವರು ದೇಶಕ್ಕೆ ನೀಡಿದ ಕೊಡುಗೆಗಳು ಶ್ಲಾಘನೀಯ. ಅವರು ಅಂಕಿ ಅಂಶಗಳ ಮೂಲಕ ಸಮೀಕ್ಷೆ ಮಾಡುವುದನ್ನು ತೋರಿಸಿ ಕೊಟ್ಟವರು. ಮಾದರಿ ಸಮೀಕ್ಷೆ ಅವರ ಅನನ್ಯ ಕೊಡುಗೆಯಾಗಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಅಂಕಿ ಅಂಶಗಳ ಸಮೀಕ್ಷೆಗಳು ಸಹಕಾರಿಯಾಗಿವೆ ಎಂದರು.
ಸರ್ಕಾರಿ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ ಸಂಖ್ಯೆಗಳ ಪಾತ್ರ ಮುಖ್ಯವಾಗಿದೆ. ನಂಬಲಾರ್ಹ ಅಂಕಿ ಅಂಶಗಳನ್ನು ಕಾಲಮಿತಿಯೊಳಗೆ ಸಂಗ್ರಹಿಸಿ ವಿಶ್ಲೇಷಣಾ ವರದಿಯನ್ನು ಪ್ರಕಟಿಸುವಲ್ಲಿ ಸಾಂಖ್ಯಿಕ ಇಲಾಖೆಯ ಪಾತ್ರ ಪ್ರಮುಖವಾಗಿದೆ ಎಂದರು.
ಪ್ರೊ. ಪಿ.ಸಿ ಮಹಾಲನೋಬಿಸ್ ಭಾರತೀಯ ಸಂಖ್ಯಾಶಾಸ್ತ್ರೀಯ ಸಂಸ್ಥೆಯನ್ನು ಸ್ಥಾಪಿಸಿದರು ಮತ್ತು ದೇಶದ ಆರ್ಥಿಕ ಯೋಜನೆ ಮತ್ತು ಅಂಕಿಅಂಶಗಳ ಅಭಿವೃದ್ಧಿ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಮಾತನಾಡಿ, ಸಂಖ್ಯಾಶಾಸ್ತ್ರಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಜಯಂತಿಯನ್ನು ಸಾಂಖ್ಯಿಕ ದಿನವನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಜಿಲ್ಲೆಯಲ್ಲಿ ಸಾಂಖ್ಯಿಕ ಇಲಾಖೆ ಕೈಗೊಳ್ಳುವ ಜನನ-ಮರಣ ನೋಂದಣಿ, ಕೃಷಿ ಅಂಕಿ ಅಂಶಗಳು, ಬೆಳೆ ಅಂದಾಜು ಸಮೀಕ್ಷೆ, ಧಾರಣಿ ವರದಿ, ರಾಷ್ಟ್ರೀಯ ಮಾದರಿ ಸಮೀಕ್ಷೆ, ಜಿಲ್ಲಾ ಅಂಕಿ ಅಂಶ ನೋಟದ ಪ್ರಕಟಣೆ ಮುಂತಾದ ಕಾರ್ಯಗಳು ಅಭಿವೃದ್ದಿ ಗಣನೆಯಲ್ಲಿ ಮಹತ್ವದ್ದಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಉಪನಿರ್ದೇಶಕಿ ಶಾರದಾ ದೊಡ್ಡಗೌಡ್ರು , ಸಾಂಖ್ಯಿಕ ಅಧಿಕಾರಿ ನೀಲಾ, ಕೌಶಲ್ಯ ಅಭಿವೃದ್ಧಿ ಸಹಾಯಕ ನಿರ್ದೇಶಕರಾದ ಡಾ. ಸಿದ್ದೇಶ್, ಇ.ಒ.ರಾಮ್ ಬೋವಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.




