ಬೆಂಗಳೂರು: ಗ್ರೇಟರ್ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದರು.
ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದರು.
ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.




