ಬೆಂಗಳೂರು: ಮೂಲಸೌಕರ್ಯ ಸೃಷ್ಟಿಯ ಕಾಮಗಾರಿಗಳ ಆರಂಭ ಬರ ಪರಿಹಾರ ಕಾಮಗಾರಿ ಸೇರಿದಂತೆ ಕೆಲವು ಅಗತ್ಯ ಕಾಮಗಾರಿ ಆರಂಭಕ್ಕೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಹಸಿರು ನಿಶಾನೆ ತೋರಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ನೀತಿ ಸಂಹಿತೆ ಬರುವ ಜೂನ್ ನಾಲ್ಕರವರೆಗೆ ಅಸ್ತಿತ್ವದಲ್ಲಿ ಇರಲಿದೆ. ಆದರೆ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಸಡಿಲಿಸುವಂತೆ ಸರ್ಕಾರ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತ್ತು. ಅಭಿವೃದ್ಧಿ ಕಾಮಗಾರಿಗಳು ಬರ ಪರಿಹಾರ ಯೋಜನೆಗಳಿಗೆ ನೀತಿ ಸಂಹಿತೆ ಅಡ್ಡಿಯಾಗಿದೆ. ಇದರಿಂದ ದೈನಂದಿನ ಆಡಳಿತ ನಿರ್ವಹಣೆ ಕೂಡ ಕಷ್ಟವಾಗಿದೆ ಎಂದು ಸರ್ಕಾರ ಮನವಿ ಸಲ್ಲಿಸಿತ್ತು.
ಸರ್ಕಾರದ ಮನವಿಗೆ ಸ್ಪಂದಿಸಿರುವ ಚುನಾವಣಾ ಆಯೋಗ ಇದೀಗ ಶರತ್ತುಗಳಿಗೆ ಒಳಪಟ್ಟು ಬರ ಪರಿಹಾರ ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಎಲ್ಲಾ ಇಲಾಖೆಗಳಿಗೆ ಸುತ್ತೋಲೆಯೊಂದನ್ನು ರವಾನಿಸಿದ್ದಾರೆ.
ಚುನಾವಣಾ ಆಯೋಗದ ಷರತ್ತುಗಳಿಗೆ ಒಳಪಟ್ಟು ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಮೂಲಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸೋದಕ್ಕೆ, ಟೆಂಡರ್ ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಸಕ್ಷಮ ಪ್ರಾಧಿಕಾರಗಳು ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.




