ಬಳ್ಳಾರಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಜಿಲ್ಲೆಯ ಪರಿಶಿಷ್ಟ ಜಾತಿಯ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು ಅಥವಾ ಮನವಿ ಪತ್ರಗಳಿದ್ದಲ್ಲಿ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮತ್ತು ಪರಿಶಿಷ್ಟ ವರ್ಗಗಳ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು ಅಥವಾ ಮನವಿ ಪತ್ರಗಳಿದ್ದಲ್ಲಿ ಬಳ್ಳಾರಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ಸೆ.23 ರಂದು ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.
ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕುಂದುಕೊರತೆಗಳ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




