ಬಿಜೆಪಿ, ಜೆಡಿಎಸ್ ಪಕ್ಷಗಳು ಟೂರಿಂಗ್ ಟಾಕೀಸ್ ನಂತೆ ದೇಶ ಬಿಟ್ಟು ತೊಲಗಲಿ: ಬೈರತಿ ಸುರೇಶ್
ಕಾಂಗ್ರೆಸ್ ಪಕ್ಷದ ಸರ್ಕಾರ ನಾಡಿನ ಮನೆ ಬಾಗಿಲಿಗೆ ಬಂದಿದೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆಗಲಿ ಎಂದು ನಾಡಿನ ಜನರು ಆಶೀರ್ವಾದ ಮಾಡಿ: ಅಬ್ದುಲ್ ವಾಜಿದ್
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ 30, 000 ಜನರಿಗೆ ದಿನಸಿ ಕಿಟ್ ಗಳನ್ನು ಸಚಿವರಾದ ಬೈರತಿ ಸುರೇಶ್, ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜಿದ್ ವಿತರಿಸಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಪ್ರತಿ ವಾರ್ಡ್ ಗಳಲ್ಲಿ ದಿನಸಿ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಮೈದಾ, ಶಾವಿಗೆ ಇನ್ನಿತರೆ ಆಹಾರ ಪದಾರ್ಥಗಳನ್ನು ದಿನಸಿ ಕಿಟ್ ಒಳಗೊಂಡಿದೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಬೈರತಿ ಸುರೇಶ್, ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದಿಂದ ಶಾಸಕ, ಸಚಿವನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯದ ಜನರ ಆಶೀರ್ವಾದದಿಂದ 136ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಆಯ್ಕೆಯಾಗಿದ್ದಾರೆ ಎಂದರು.




5 ಗ್ಯಾರೆಂಟಿ ಯೋಜನೆಗಳು ನಾಡಿನ ಜನತೆಗೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ. ಮನೆಯ ಯಾಜಮಾನಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ನಿಮ್ಮ ಆಶೀರ್ವಾದದಿಂದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರ ಜನರಿಗೆ ಯಾವುದೇ ಯೋಜನೆ ನೀಡಿಲ್ಲ. ಹಿಂದೂ, ಮುಸ್ಲಿಂ, ಕಿಶ್ಚಿಯನ್, ಜೈನ್, ಸಿಖ್ ಎಲ್ಲರು ಒಗ್ಗಾಟ್ಟಗಿ ಬಾಳಿ ಬದುಕುತ್ತಿದ್ದೇವೆ. ನಿಮ್ಮ ಆಶೀರ್ವಾದ, ಪ್ರೀತಿ ಇರುವ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ವ್ಯಾಪಾರಕ್ಕಾಗಿ ಬಿಜೆಪಿ , ಜೆಡಿಎಸ್ ಪಕ್ಷಗಳು ಟೂರಿಂಗ್ ಟಾಕೀಸ್ ನಂತೆ ವರ್ತಿಸುತ್ತಿದೆ. ಎರಡು ಪಕ್ಷಗಳು ದೇಶದಿಂದ ತೊಲಗಲಿದೆ ಎಂದರು.
ಅಬ್ದುಲ್ ವಾಜಿದ್ ಮಾತನಾಡಿ, ದೇಶದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಸಹೋದರತ್ವದಲ್ಲಿ ಬಾಳುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು, ಸಚಿವರಾದ ಬೈರತಿ ಸುರೇಶ್ ರವರು ಉತ್ತಮ ಆಡಳಿತ ನೀಡಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ಮನೆಮನೆಗಳಿಗೆ ತಲುಪಿಸಲಾಗಿದೆ. ಮನೆಯ ಯಾಜಮಾನಿಗೆ 24 ಸಾವಿರ ವರ್ಷದಲ್ಲಿ ಸಿಗಲಿದೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಅನ್ನಭಾಗ್ಯ ಅಕ್ಕಿ ಉಚಿತ, ವಿದ್ಯುತ್ ಉಚಿತ ಕಾರ್ಯಗಳಿಂದ ಮನೆ ಬಾಗಿಲಿಗೆ ಕಾಂಗ್ರೆಸ್ ಸರ್ಕಾರ ಬಂದಿದೆ ಎಂದರು.
ನಾಡಿನ ಜನರು 2028ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷದ ಸರ್ಕಾರದ ಅಧಿಕಾರ ಬರಲಿ, ಮುಂದಿನ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯರವರು ಆಗಲಿ ಎಂದು ಆಶೀರ್ವಾದ ಮಾಡಿ ಎಂದರು.
ಸಾವಿರಾರು ಮಹಿಳೆಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



