ಬೆಂಗಳೂರು: ಜಿಎಸ್ ಟಿ ನೊಂದಣಿ ಇಲ್ಲದೆ ವಾರ್ಷಿಕವಾಗಿ 40 ಲಕ್ಷ ರೂಪಾಯಿ ವಹಿವಾಟು ನಡೆಸಿದ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ಮತ್ತು ತೆರಿಗೆ ಇಲಾಖೆ ನೋಟಿಸ್ ನೀಡಿರುವ ಕ್ರಮವಿರೋಧಿಸಿ ವ್ಯಾಪಾರಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಭಟನೆಯ ಮೊದಲ ಭಾಗವಾಗಿ ಹಾಲು ಮಾರಾಟಗಾರರು ವಹಿವಾಟು ಸ್ಥಗಿತಗೊಳಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಈ ನಡುವೆ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಅದಕ್ಕಾಗಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಿ ವಸೂಲಿ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲ ವ್ಯಾಪಾರಿಗಳು ಅತ್ಯಂತ ಭಯ, ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಸತ್ಯ ಮರೆ ಮಾಚುತ್ತಿರುವ ಮುಖ್ಯಮಂತ್ರಿಗಳು ಸೇರಿ ಸಚಿವ ಸಂಪುಟದ ಸದಸ್ಯರು ಕೇಂದ್ರ ಸರಕಾರವನ್ನು ದೂರುವ ಕುತಂತ್ರ ಮಾಡುತ್ತಿದ್ದಾರೆ ಎಂದರು.
ಜಿಎಸ್ಟಿ್ ಸಂಗ್ರಹದ ವಿಷಯದಲ್ಲಿ ಕರ್ನಾಟಕ ಮೊದಲ ಸ್ಥಾನಕ್ಕೆ ಬರಬೇಕೆಂದು ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿಯೇ ಹೇಳಿದ್ದರು. ಮಹಾರಾಷ್ಟ್ರವನ್ನು ಹಿಂದಿಕ್ಕಿ ಅತಿ ಹೆಚ್ಚು ಜಿಎಸ್ಟಿಸ ಸಂಗ್ರಹ ಮಾಡಬೇಕೆಂದು ಹೇಳಿದ್ದರು. ಅದಕ್ಕಾಗಿ ಅಧಿಕಾರಿಗಳಿಗೆ ಮೊತ್ತದ ಗುರಿಯನ್ನೂ ನೀಡಿದ್ದರು ಎಂದರು.
ಹಾಲು ಮತ್ತಿತರ ಕೆಲ ವಸ್ತುಗಳು ಜಿಎಸ್ಟಿರ ವ್ಯಾಪ್ತಿಗೆ ಬರುವುದಿಲ್ಲ. ಅಂಥವರಿಗೂ ನೋಟಿಸ್ ಕೊಟ್ಟಿದ್ದಾರೆ. ಜಿಎಸ್ಟಿಟ ವ್ಯವಸ್ಥೆಯಲ್ಲಿ 3 ಸ್ಲ್ಯಾಬ್ಗಾಳಿವೆ. ಎಲ್ಲರಿಗೂ ವಾಣಿಜ್ಯ ತೆರಿಗೆ ಇಲಾಖೆಯು ಶೇ 18ರ ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದೆ. ಖಜಾನೆ ಖಾಲಿ ಆಗಿದೆ ಎಂಬ ಕಾರಣಕ್ಕೆ ಯಾವುದನ್ನೂ ಪರಿಶೀಲಿಸದೆ, ವಿಮರ್ಶೆ ಮಾಡದೇ ರಾತ್ರೋರಾತ್ರಿ ನೋಟಿಸ್ ಕೊಡುತ್ತಿದ್ದು, ಎಲ್ಲ ವ್ಯಾಪಾರಿಗಳು ಭಯಭೀತರಾಗಿದ್ದಾರೆ. ಇಂಥ ಕೆಲಸಕ್ಕೆ ಕೈ ಹಾಕಿದ ರಾಜ್ಯ ಸರಕಾರ ತಕ್ಷಣ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದರು.



