ಗ್ಯಾರಂಟಿಗೆ ಕೇಂದ್ರದಿಂದ ನಯಾಪೈಸೆಯೂ ಬೇಕಾಗಿಲ್ಲ: ಕೃಷ್ಣ ಬೈರೇಗೌಡ

2 years ago

ಬೆಂಗಳೂರು: ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸಿಕೊಳ್ಳುತ್ತಿದ್ದೇವೆ. ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ರೂ.11,200 ಕೋಟಿ ಹಣವನ್ನೂ ಸಹ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳಿಗೆ ಇವರಿಂದ(ಕೇಂದ್ರದಿಂದ) ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ನಿಮ್ಮ ಉದಾರತನವೇನು ಬೇಕಾಗಿಲ್ಲ ಎಂದರು.

ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರ್ಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಅವರು ಒತ್ತಾಯಿಸಿದರು.

Leave a Reply