ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಜನಸಂಪರ್ಕ ಕಛೇರಿಯಲ್ಲಿ ಕೊಳಗೇರಿ ನಿರ್ಮೂಲನಾ ಮಂಡಳಿ ವತಿಯಿಂದ ನಾಗಮ್ಮ ನಗರದ 38 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಶಾಸಕ, ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ಸಿಕ್ಕಿರುವುದರಿಂದ ಈ ಜಾಗ ನಿಮ್ಮ ಸ್ವತ್ತಾಗುತ್ತದೆ. ಇಂದಿನಿಂದ ತಾವು ಮನೆಯ ಮಾಲೀಕರು ನಿಮಗೆ ಇ-ಖಾತೆ ಮಾಡಿಸಿಕೊಡಲಾಗುವುದು. ಹಕ್ಕುಪತ್ರ ಮಹಿಳೆಯರ ಹೆಸರಿನಲ್ಲಿ ಮಾಡಿಕೊಡಲಾಗಿದೆ ಎಂದರು.
ನಮ್ಮ ಸರ್ಕಾರ ಮಹಿಳೆಯರಿಗೆ ಆದ್ಯತೆ ನೀಡಿ, ಮಹಿಳಾ ಪರ ಯೋಜನೆಗಳನ್ನು ರೂಪಿಸಿ ಮಹಿಳೆಯರಿಗೆ ಗೌರವಿಸಲಾಗುತ್ತಿದೆ. ನಾಗಮ್ಮ ನಗರದಲ್ಲಿ ಒಟ್ಟಾರೆ 220 ಮನೆಗಳಿಗೆ ಹಕ್ಕುಪತ್ರ ನೀಡಲಾಗಿದೆ. ಉಳಿದ 50 ಮನೆಗಳಿಗೆ ಹಕ್ಕುಪತ್ರ ಮುಂದಿನ ದಿನ ಕೊಡಿಸಲಾಗಿದೆ. 98 ಮನೆಗಳನ್ನು ಕಟ್ಟಿಕೊಡಲಾಗಿದೆ ಎಂದರು.
5 ಗ್ಯಾರೆಂಟಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಶಕ್ತಿಯೋಜನೆ, ಯುವನಿಧಿ, ಗೃಹಜ್ಯೋತಿ, ಮನೆಯ ಯಾಜಮಾನಿಗೆ 2000 ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಡವರ ಪರ ಕೆಲಸ ಮಾಡುತ್ತಿದ್ದಾರೆ. ಕುಟುಂಬದ ಭದ್ರತೆ ಮತ್ತು ಬಡತನ ನಿರ್ಮೂಲನಕ್ಕೆ ನಮ್ಮ ಸರ್ಕಾರ ಹೋರಾಟ ಮಾಡುತ್ತಿದೆ ಎಂದರು.
ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸರವಣನ್ ಮತ್ತು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಬು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಧಾಕರ್ ಅಡ್ಡಪ್ಪ, ನಾಗೇಶ್, ಕಣ್ಣನ್, ಕುಮಾರ್, ರಾಜೇಶ್, ಕಾಂಗ್ರೆಸ್ ಪಕ್ಷದ ಮುಖಂಡರು, ಕೊಳಗೇರಿ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಹಾಜರಿದ್ದರು.








